Life is like this loading!

We've to prepare well to perform better

2019-20 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ (6-8th) ಶಿಕ್ಷಕರ ನೇಮಕಾತಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ
Author: Basavaraj Halli | Date:13 ಜುಲೈ 2019
Image not found

2019-20 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಆರರಿಂದ ಎಂಟನೇ ತರಗತಿ ನೇಮಕಾತಿ ಪರೀಕ್ಷೆಯ ಪರೀಕ್ಷಕರ ಪರಿಷ್ಕೃತ ಕೀ ಉತ್ತರಗಳು ಪ್ರಕಟಗೊಂಡಿವೆ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2019 ಪರೀಕ್ಷೆ-1 ಮತ್ತು ಪರೀಕ್ಷೆ-2 ಪರಿಷ್ಕೃತ ಕೀ ಉತ್ತರಗಳನ್ನು ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 18-06-2019 ರಂದು ಮಂಗಳವಾರ ಇಲಾಖೆಯು ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಿತ್ತು, ಪ್ರಸ್ತುತ ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಪ್ರಕಟಿಸಿದೆ. ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಭ್ಯರ್ಥಿಗಳು ಪರಿಷ್ಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ನೋಡಬಹುದಾಗಿದೆ.