KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

ಮೈಸೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Image not found

Author: Kpsc vaani Date:June 15, 2019   ಮೈಸೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್'ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಮೈಸೂರು ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.

No. of posts:  154

Application Start Date:  June 6, 2019

Application End Date:  July 2, 2019

Work Location:  ಮೈಸೂರು

Selection Procedure:  ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ/ ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

1. ಅರ್ಹ ವಿದ್ಯಾರ್ಹತೆ ಹೊಂದಿದ ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು, ಅಂಗನವಾಡ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ,ಆಸಿಡ್ ದಾಳಿಗೆ ತುತ್ತಾದ ಮಹಿಳೆಯರನ್ನು ಪ್ರಥಮ ಆದ್ಯತೆ ಮೇರೆಗೆ ಆಯ್ಕೆ ಮಾಡಿಕೊಳ್ಳಲಾಗುವುದು.

2. ಇಲಾಖೆಯ ಸುಧಾರಣೆ ಸಂಸ್ಥೆಗಳಲ್ಲಿ ಆಶ್ರಯ ಪಡೆದ ಹಾಲಿ ಮತ್ತು ಮಾಜಿ ನಿವಾಸಿಗಳು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಯ ಪ್ರಕರಣವನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಆಯ್ಕೆ ಮಾಡಲಾಗುವುದು.

3. ಅರ್ಹ ವಿದ್ಯಾರ್ಹತೆ ಹೊಂದಿದ ವಿಧವೆಯರು ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಗೆ ಒಳಗಾದ ಮಹಿಳೆ ಮತ್ತು ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ವಿಧವೆಯರನ್ನೇ ಆಯ್ಕೆ ಮಾಡಲಾಗುವುದು. ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ (ವಿಧವೆಗೆ) ಪ್ರಥಮ ಆದ್ಯತೆ ನೀಡಲಾಗುವುದು.

4. ಅರ್ಹ ವಿದ್ಯಾರ್ಹತೆ ಹೊಂದಿದ ಶೇಕಡಾ 60% ಮೀರದಂತೆ ಅಂಗವಿಕಲತೆ ಹೊಂದಿದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಮೇಲೆ ವಿವರಿಸಿದ ಕ್ರಮ ಸಂಖ್ಯೆ:- 1,2 & 3 ರ ಪ್ರಕರಣಗಳನ್ನು ಹೊರತುಪಡಿಸಿದ, ಸ್ವೀಕೃತವಾಗಿರುವ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿ, ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಂಗವಿಕಲ ಅಭ್ಯರ್ಥಿಗಳು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವಂತಿಲ್ಲ. ಒಂದುವೇಳೆ ಅರ್ಜಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುವುದು.

5. ಮೇಲೆ ವಿವರಿಸಿದ ಕ್ರಮ ಸಂಖ್ಯೆ:- 1,2,3 & 4ರ ಪ್ರಕರಣಗಳನ್ನು ಹೊರತುಪಡಿಸಿ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಇಲಾಖೆ ನಿಗಧಿಪಡಿಸಿದ ಮಾನದಂಡಗಳ ಪ್ರಕಾರ ಆಯ್ಕೆ ಮಾಡಲಾಗುವುದು

Qualification:  * ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

Age Limit:  ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

** ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು

Click here
to apply online
Click here
to download official notification