* 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಿಂದ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನೂತನವಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
* ಜೂನ್ 26 ರಂದು ಸ್ಪೀಕರ್ ಚುನಾವಣೆ ನಡೆಯಲಿದ್ದು, ಜೂನ್.27 ರಂದು ಜಂಟಿ ಆಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡಲಿದ್ದಾರೆ. ಈ ನಡುವೆ ಹಂಗಾಮಿ ಸ್ಪೀಕರ್ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ವಿರುದ್ಧ ಸಮರ ಮುಂದುವರಿಸಿದೆ.
* ಬಿ ಜೆ ಪಿ ನಾಯಕ ಮತ್ತು ಏಳು ಬಾರಿ ಸಂಸದರಾಗಿ ಇರುವ ಬಿ.ಮಹತಾಬ್ ಅವರು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ.
* ಲಖನೌ ಕ್ಷೇತ್ರದ ಸಂಸದರಾಗಿ ರಾಜನಾಥ್ ಸಿಂಗ್ ನಾಗ್ಪರು ಅವರು ಸಂಸದರಾಗಿ ಹಾಗೂ ನಿತಿನ್ ಗಡ್ಕರಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು.
* ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಅವರು ಹೊಸದಾಗಿ ಆಯ್ಕೆಯಾದ ಸಂಸದರ ಪಟ್ಟಿಯನ್ನು ಮೊದಲು ಮಂಡಿಸಲಿದ್ದಾರೆ. ಏಪ್ರಿಲ್‌ನಿಂದ ಜೂನ್‌ವರೆಗೆ ನಡೆದ ಸಾರ್ವತ್ರಿಕ ಚುನಾವಣೆಯ ನಂತರ ನಡೆಯುತ್ತಿರುವ ಮೊದಲ ಲೋಕಸಭೆ ಅಧಿವೇಶನ ಇದಾಗಿದೆ.
* 18 ನೇ ಲೋಕಸಭೆಯಲ್ಲಿ NDA 293 ಸ್ಥಾನಗಳೊಂದಿಗೆ ಬಹುಮತವನ್ನು ಹೊಂದಿದೆ, ಆದರೆ ಬಿಜೆಪಿ 240 ಸ್ಥಾನಗಳನ್ನು ಹೊಂದಿದೆ. ಇಂಡಿಯಾ ಬ್ಲಾಕ್ 234 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ 99 ಸ್ಥಾನಗಳನ್ನು ಹೊಂದಿದೆ.
* ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲು ಹಂಗಾಮಿ ಸ್ಪೀಕರ್‌ಗೆ ನೆರವಾಗಲು ಸದಸ್ಯರಾದ ಕೆ. ಸುರೇಶ್ (ಕಾಂಗ್ರೆಸ್), ಟಿ.ಆರ್.ಬಾಲು (ಡಿಎಂಕೆ), ರಾಧಾ ಮೋಹನ್ ಸಿಂಗ್, ಫಗ್ಗನ್ ಸಿಂಗ್ ಕುಲಸ್ತೆ (ಇಬ್ಬರೂ ಬಿಜೆಪಿ) ಹಾಗೂ ಸುದೀಪ್ ಬಂದ್ಯೋಪಾಧ್ಯಾಯ (ಟಿಎಂಸಿ) ಅವರನ್ನು ರಾಷ್ಟ್ರಪತಿ ನೇಮಿಸಿದ್ದಾರೆ.
18ನೇ ಲೋಕಸಭೆ : ಮೊದಲ ಅಧಿವೇಶನ ಜೂನ್ 24 ರಿಂದ ಆರಂಭ
Published by Bhagya R K
25 ಜೂನ್ 2024