* ₹2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಇಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ₹ 2 ಸಾವಿರದ ನೋಟು ವಿತರಣೆ ನಿಲ್ಲಿಸಲು ಬ್ಯಾಂಕ್‌ಗಳಿಗೆ ಈಗಾಗಲೇ ಸೂಚನೆ ನೀಡಿದೆ.
* ಸದ್ಯ ಚಲಾವಣೆಯಲ್ಲಿ ಇರುವ ನೋಟುಗಳನ್ನು ಸೆಪ್ಟೆಂಬರ್ 30ರ ಒಳಗಾಗಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡುವಂತೆ ಅಥವಾ ಬೇರೆ ಮುಖಬೆಲೆಯ ನೋಟುಗಳೊಂದಿಗೆ ವಿನಿಮಯ ಮಾಡಿಕೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.
* ಮೇ 23ರಿಂದ ನೋಟುಗಳನ್ನು ಬದಲಿಸಿಕೊಳ್ಳಬಹುದಾಗಿದೆ, ₹2 ಸಾವಿರ ಮುಖಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಂಕ್ (ಆರ್‌ಬಿಐ) 2016ರ ನವೆಂಬರ್‌ನಲ್ಲಿ ಚಲಾವಣೆಗೆ ತಂದಿತ್ತು.
2,000 ಸಾವಿರ ನೋಟು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ (RBI)
Published by Yallamma G
20 ಮೇ 2023