* 2020ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟವಾಗಿದ್ದು, ಪ್ರಜ್ವಲ್ ದೇವರಾಜ್ ಅವರು 'ಜಂಟಲ್‌ಮ್ಯಾನ್' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ಮತ್ತು ಅಕ್ಷತಾ ಪಾಂಡವಪುರ ಅವರು 'ಪಿಂಕಿ ಎಲ್ಲಿ' ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
* ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ 'ಪಿಂಕಿ ಎಲ್ಲಿ, ಚಿತ್ರ ಆಯ್ಕೆಯಾಗಿದ್ದರೆ, ವರ್ಣಪಟಲ ಚಿತ್ರಕ್ಕೆ 2ನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಸಿಕ್ಕಿದೆ. ಹರಿವ ನದಿಗೆ ಮೈಯೆಲ್ಲ ಕಾಲು ಚಿತ್ರಕ್ಕೆ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ.
* ಅತ್ಯುತ್ತಮ ನಾಯಕ ಮತ್ತು ನಾಯಕಿಗೆ 20 ಸಾವಿರ ರೂಪಾಯಿಗಳ ನಗದು ಮತ್ತು 100 ಗ್ರಾಂ ಬೆಳ್ಳಿ ಪದಕ ನೀಡಲಾಗುವುದು. ಅತ್ಯುತ್ತಮ ಚಿತ್ರಕ್ಕಾಗಿ ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ 50 ಗ್ರಾಂ ಚಿನ್ನದ ಪದಕ ಒಳಗೊಂಡಿದೆ.
* 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ಮುಂದಾಳತ್ವವನ್ನು ಬಿ.ಎಸ್‌. ಲಿಂಗದೇವರು ವಹಿಸಿಕೊಂಡಿದ್ದರು. ಈ ಆಯ್ಕೆ ಸಮಿತಿ ಸುಮಾರು 66 ಸಿನಿಮಾಗಳನ್ನು ವೀಕ್ಷಣೆ ಮಾಡಿ ಹಲವು ವಿಭಾಗಗಳಿಗೆ ಸಿನಿಮಾಗಳನ್ನು ಆಯ್ಕೆ ಮಾಡಿದ್ದಾರೆ.
2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ
* ಅತ್ಯುತ್ತಮ ನಟ: ಪ್ರಜ್ವಲ್‍ ದೇವರಾಜ್‍ (ಜಂಟಲ್‌ಮನ್)
* ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಪಿಂಕಿ ಎಲ್ಲಿ)
* ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ
* 2ನೇ ಅತ್ಯುತ್ತಮ ಚಿತ್ರ: ವರ್ಣಪಟಲ
* 3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು
* ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು
* ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಫೋರ್ ವಾಲ್ಸ್
* ಅತ್ಯುತ್ತಮ ಮಕ್ಕಳ ಚಿತ್ರ: ಪದಕ
* ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ನೀಲಿ ಹಕ್ಕಿ
* ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಚಿತ್ರ: ಜೀಟಿಗೆ
* ಅತ್ಯುತ್ತಮ ಸಂಗೀತ ನಿರ್ದೇಶಕ: ಗಗನ್‍ ಬಡೇರಿಯಾ
* ಅತ್ಯುತ್ತಮ ಸಂಕಲನ: ನಾಗೇಂದ್ರ
* ಅತ್ಯುತ್ತಮ ಪೋಷಕ ನಟ: ರಮೇಶ್‍ ಪಂಡಿತ್‍
* ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ
* ಅತ್ಯುತ್ತಮ ಕಥೆ: ಶಶಿಕಾಂತ್‍ ಗಟ್ಟಿ
* ಅತ್ಯುತ್ತಮ ಚಿತ್ರಕಥೆ: ರಾಘವೇಂದ್ರ ಕುಮಾರ್‍
* ಅತ್ಯುತ್ತಮ ಸಂಭಾಷಣೆ: ವೀರಪ್ಪ ಮರಳವಾಡಿ
* ಅತ್ಯುತ್ತಮ ಛಾಯಾಗ್ರಹಣ: ಅಶೋಕ್ ಕಶ್ಯಪ್‍
ಪ್ರಶಸ್ತಿ ಮೊತ್ತ
- ಮೊದಲನೇ ಅತ್ಯುತ್ತಮ ಚಿತ್ರ: ₹1 ಲಕ್ಷ ನಗದುಹಾಗೂ 50 ಗ್ರಾಂ ಚಿನ್ನದ ಪದಕ
- ಎರಡನೇ ಅತ್ಯುತ್ತಮ ಚಿತ್ರ: ₹75 ಸಾವಿರ ನಗದುಹಾಗೂ 100 ಗ್ರಾಂ ಬೆಳ್ಳಿ ಪದಕ
- ಮೂರನೇ ಅತ್ಯುತ್ತಮ ಚಿತ್ರ: ₹50 ಸಾವಿರ ನಗದುಹಾಗೂ 100 ಗ್ರಾಂ ಬೆಳ್ಳಿ ಪದಕ
- ವಿಶೇಷ ಸಾಮಾಜಿಕ ಕಾಳಜಿಯ ಪ್ರಶಸ್ತಿ: ₹75 ಸಾವಿರ ನಗದುಹಾಗೂ 100 ಗ್ರಾಂ ಬೆಳ್ಳಿ ಪದಕ
- ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ನಟಿ: ₹20 ಸಾವಿರ ನಗದುಹಾಗೂ 100 ಗ್ರಾಂ ಬೆಳ್ಳಿ ಪದಕ