ಸ್ಥಳೀಯ/ದೇಸಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿ ಕರಕುಶಲಕರ್ಮಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ರೈಲ್ವೆ ಇಲಾಖೆಯು ಕರ್ನಾಟಕ 26 ರೈಲು ನಿಲ್ದಾಣಗಳಲ್ಲಿ 'ಒಂದು ನಿಲ್ದಾಣ-ಒಂದು ಉತ್ಪನ್ನ' ಯೋಜನೆಯನ್ನು ಆರಂಭಿಸಿದೆ.
21 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳ 728 ನಿಲ್ದಾಣಗಳಲ್ಲಿ ಈ ಯೋಜನೆಯು ಆರಂಭವಾಗಿದೆ.
ಈ ಯೋಜನೆಯಡಿ ರೈಲ್ವೆ ನಿಲ್ದಾಣಗಳಲ್ಲಿ ಮಳಿಗೆಗಳನ್ನು ತೆರೆಯಲಾಗುತ್ತದೆ. ಸ್ಥಳೀಯ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮಾಡಲಾಗುತ್ತದೆ. ಆಯಾ ಪ್ರದೇಶದ ನಿರ್ದಿಷ್ಟ ಉತ್ಪನ್ನಗಳ ಮಾರಾಟಕ್ಕೆ ಉತ್ತೇಜನ ನೀಡಲಾಗುತ್ತದೆ.ಸ್ಥಳೀಯ ನೇಕಾರರ ಕೈಮಗ್ಗಗಳು, ಸ್ಥಳೀಯ ಬುಡಕಟ್ಟು ಸಮುದಾಯದವರು ಮಾಡಿದ ಕಲಾಕೃತಿಗಳು, ಕರಕುಶಲ ವಸ್ತುಗಳು, ಮಸಾಲೆ ಚಹಾ, ಕಾಫಿ, ಸಂಸ್ಕರಿತ ಆಹಾರ ಪದಾರ್ಥಗಳು/ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
Test Your Knowledge!
Attempt daily current affairs quizzes to boost your exam readiness.
Discussion & Comments (0)
Have a query or thoughts about this current affair?
No comments on this article yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.