* ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಈ ವರ್ಷದ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದಾಗಿ ಘೋಷಿಸಲಾಗಿದೆ.* ಮಂಡ್ಯದಲ್ಲಿ ಡಿಸೆಂಬರ್ ಕೊನೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನದ ಅಧ್ಯಕ್ಷರಾಗಿ 94 ವರ್ಷದ ಹಿರಿಯ ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪನವರು ಆಯ್ಕೆಯಾಗಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿಯವರು ಮಾಹಿತಿ ನೀಡಿದ್ದಾರೆ.* ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್. 20, 21, ಹಾಗೂ 23 ರಂದು ಈ ಸಮ್ಮೇಳನ ನಡೆಯಲಿದೆ.* ಜನಪದ ತಜ್ಞರು, ವಿದ್ವಾಂಸರು ಹಾಗೂ ಹಿರಿಯ ಸಾಹಿತಿಗಳಾದ ಗೊ.ರು ಚನ್ನಬಸಪ್ಪ ಅವರು 1992 ರಿಂದ 1995ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರು ಅಧ್ಯಕ್ಷರಾಗಿದ್ದಾಗಲೇ 1994ರಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆದಿತ್ತು.* ಚನ್ನಬಸಪ್ಪ ಅವರು ಕರ್ನಾಟಕ ಜನಪದ ಕಲೆಗಳು ಎಂಬ ಕೃತಿಯನ್ನು ಸಂಪಾದಿಸಿದ್ದು ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ ಗ್ರಾಮಗೀತೆಗಳು, ಹೊನ್ನ ಬಿತ್ತೇವು ನೆಲಕಲ್ಲ, ಮಹಾದೇವಿ, ಸದಾಶಿವ ಶಿವಾಚಾರ್ಯ, ಚೆಲುವಾಂಬಿಕೆ, ಬೆಳ್ಳಕ್ಕಿ ಹಿಂಡು ಬೆದರ್ಯಾವೊ, ವಿಭೂತಿ, ಇತ್ಯಾದಿ ಕೃತಿಗಳನ್ನು ರಚಿಸಿದ್ದಾರೆ.* ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವಲ್ಲಿ ಗೊ.ರು ಚನ್ನಬಸಪ್ಪ ಅವರು ಮಹತ್ವದ ಪಾತ್ರ ವಹಿಸಿದ್ದರು. 'ಜಾನಪದ ಜಗತ್ತು', 'ಪಂಚಾಯತ್ ರಾಜ್ಯ', 'ಕನ್ನಡ ಸಾಹಿತ್ಯ ಪರಿಷತ್ ಪತ್ರಿಕೆ' ಮೊದಲಾದ ಪತ್ರಿಕೆಗಳಿಗೆ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ.* 2023 ರ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಧ್ಯ ಕರ್ನಾಟಕ ಜಿಲ್ಲೆ ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿ ಜಿಲ್ಲೆಯಲ್ಲಿ ವಿಜೃಂಭಣೆಯಿಂದ ನಡೆದಿತ್ತು. ಅಂದು ಹಿರಿಯ ಸಾಹಿತಿ ದೊಡ್ಡರಂಗೇಗೌಡರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.* ಗೊ.ರು. ಚೆನ್ನಬಸಪ್ಪನವರು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಗೊಂಡೇದಹಳ್ಳಿಯಲ್ಲಿ 18ನೇ ಮೇ 1930ರಲ್ಲಿ ಜನಿಸಿದರು. ಇವರಿಗೆ ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ, ಕರ್ನಾಟಕದ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ.* ಮಹಾದೇವಿ, ಸದಾಶಿವ ಶಿವಾಚಾರ್ಯ, ಕರ್ನಾಟಕ ಪ್ರಗತಿಪಥ, ಚೆಲುವಾಂಬಿಕೆ, ಕುನಾಲ, ಸಾಕ್ಷಿ ಕಲ್ಲು, ಬೆಳ್ಳಕ್ಕಿ ಹಿಂಡು ಬೆದರ್ಯಾವೊ, ಬಾಗೂರು ನಾಗಮ್ಮ, ಗ್ರಾಮ ಗೀತೆಗಳು, ವಿಭೂತಿ, ಕರ್ನಾಟಕ ಜನಪದ ಕಲೆಗಳು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ನೆಲಕೆಲ್ಲ.. ಇವು ಗೊ.ರು. ಚನ್ನಬಸಪ್ಪ ಅವರ ಪ್ರಮುಖ ಕೃತಿಗಳಾಗಿವೆ. * 1992ರಿಂದ 1995ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ 18ನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಚನ್ನಬಸಪ್ಪನವರು 1993ರಲ್ಲಿ ಕೊಪ್ಪಳ, 1994ರಲ್ಲಿ ಮಂಡ್ಯ ಹಾಗೂ 1995ರಲ್ಲಿ ಬಾಗಲಕೋಟೆಯ ಮುಧೋಳ ಹಾಗೂ 62, 63 , 64ನೇ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.