* ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Akhila Bharata Kannada Sahitya Sammelana) ಅಧ್ಯಕ್ಷರಾಗಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ (Banu Mushtaq) ಅವರು ಆಯ್ಕೆಯಾಗಿದ್ದಾರೆ.
* ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ನೇತೃತ್ವದಲ್ಲಿ ಬಳ್ಳಾರಿಯಲ್ಲಿ (Ballari) ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು ಸರ್ವಾನುಮತದಿಂದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಾರೆ.
* ಜೂ. 29ರಂದು ಬಳ್ಳಾರಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರು ತಿಳಿಸಿದರು.
* ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ (Heart Lamp) ಪ್ರಶಸ್ತಿ ಸಿಕ್ಕಿತ್ತು. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್ (ಅಂದಾಜು 57.28 ಲಕ್ಷ ರೂ.) ಒಳಗೊಂಡಿತ್ತು. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು.
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
Published by Yallamma G
28 ಜೂನ್ 2025