* ಕರ್ನಾಟಕ ಲೇಖಕಿಯರ ಸಂಘ ನೀಡುವ 2023ನೇ ಸಾಲಿನ ಟಿ. ಎಸ್. ಆರ್. ಪ್ರಶಸ್ತಿ ಪುರಸ್ಕೃತರಾದ ನಾಗಮಣಿ ಎಸ್. ರಾವ್ ದತ್ತಿ ಪ್ರಶಸ್ತಿಗೆ ಪತ್ರಕರ್ತೆಯಾದ ಆರ್. ಪೂರ್ಣಿಮಾ ಅವರು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ.ಎಚ್.ಎಲ್.ಪುಷ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
* ಈ ಪ್ರಶಸ್ತಿಯನ್ನು ಜುಲೈ 8 ರಂದು ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ಕಮಲಾ ಹಂಪನಾ ಅವರು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
* ಈ ಪ್ರಶಸ್ತಿಯು ನಗದು 5 ಸಾವಿರ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದ್ದು, ಕನ್ನಡ ಪತ್ರಿಕಾ ಕ್ಷೇತ್ರ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಮೊದಲ ಪ್ರಶಸ್ತಿಯನ್ನು ಪತ್ರಕರ್ತ ಆರ್. ಪೂರ್ಣಿಮಾ ಅವರಿಗೆ ನೀಡಲಾಗುತ್ತಿದೆ' ಎಂದು ಲೇಖಕಿಯರ ಸಂಘದ ಅಧ್ಯಕ್ಷರಾದ ಎಚ್.ಎಲ್. ಪುಷ್ಪ ಅವರು ತಿಳಿಸಿದ್ದಾರೆ.
ಬುಧವಾರ, 05 ಜುಲೈ 2023
1:21 ಅಪರಾಹ್ನ
Daily PDF
ಆರ್. ಪೂರ್ಣಿಮಾ ಅವರು ನಾಗಮಣಿ ರಾವ್ ದತ್ತಿ ಪ್ರಶಸ್ತಿಗೆ ಆಯ್ಕೆ
Authored by:
Bhagya R K