* ಕರ್ನಾಟಕ ಸರ್ಕಾರವು ದಿವಂಗತ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರಿನಲ್ಲಿ ಹೊಸ ಪ್ರಶಸ್ತಿಯನ್ನು ಸ್ಥಾಪಿಸಿದೆ. ಈ ಪ್ರಶಸ್ತಿಗೆ ‘ಅಭಿನಯ ಸರಸ್ವತಿ ಬಿ. ಸರೋಜಾ ದೇವಿ’ ಎಂದು ನಾಮಕರಣ ಮಾಡಲಾಗಿದೆ.
* ಈ ಪ್ರಶಸ್ತಿಯಲ್ಲಿ ₹1 ಲಕ್ಷ ನಗದು ಬಹುಮಾನ ಮತ್ತು 100 ಗ್ರಾಂ ಬೆಳ್ಳಿ ಪದಕ ಒಳಗೊಂಡಿರುತ್ತದೆ.
* ಇದನ್ನು ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ-2011ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ನಿಯಮದಂತೆ ಜಾರಿಗೆ ತರಲಾಗಿದೆ.
* ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಸೇವೆ ಸಲ್ಲಿಸಿದ ಮಹಿಳಾ ಸಾಧಕಿಯರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.
* ಇತ್ತೀಚೆಗೆ ಬಿ. ಸರೋಜಾದೇವಿ ಅವರಿಗೆ ರಾಜ್ಯ ಸರ್ಕಾರವು ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಮರಣೋತ್ತರವಾಗಿ ಘೋಷಿಸಿತ್ತು.
ಗುರುವಾರ, 18 ಸೆಪ್ಟೆಂಬರ್ 2025
3:04 ಅಪರಾಹ್ನ
Daily PDF
'ಅಭಿನಯ ಸರಸ್ವತಿ ಬಿ. ಸರೋಜಾ ದೇವಿ' ಪ್ರಶಸ್ತಿ ಸ್ಥಾಪನೆ
Authored by:
Jyoti Angadi