* ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರು ಜೂನ್ ತಿಂಗಳ ಐಸಿಸಿ ಆಟಗಾರ ಗೌರವಕ್ಕೆ ಭಾಜನರಾಗಿದ್ದಾರೆ. ಇದೇ ವೇಳೆ ಭಾರತದ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂದಾನ ಅವರು ಜೂನ್ ತಿಂಗಳ ಐಸಿಸಿ ಮಹಿಳಾ ಆಟಗಾರ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ.
* ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಅಫ್ಘಾನಿಸ್ತಾನದ ಆರಂಭಿಕ ಬ್ಯಾಟರ್ ರೆಹಮಾನುಲ್ಲಾ ಗುರ್ಬಾಜ್ ಅವರನ್ನು ಹಿಂದಿಕ್ಕಿ ಬೂಮ್ರಾ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
* ವೆಸ್ಟ್‌ಇಂಡೀಸ್ ಹಾಗೂ ಅಮೆರಿಕದ ಆತಿಥ್ಯದಲ್ಲಿ ನಡೆದ ಟಿ2-0 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ್ದ ಭಾರತ ಕಿರೀಟ ಮುಡಿಗೇರಿಸಿಕೊಂಡಿತ್ತು. ಟಿ20 ವಿಶ್ವಕಪ್‌ನಲ್ಲಿ ತೋರಿದ ಅತ್ಯುತ್ತಮ ಪ್ರದರ್ಶನಕ್ಕಾಗಿ ಬೂಮ್ರಾ ಅವರಿಗೆ ಈ ಗೌರವ ಒಲಿದಿದೆ.
* ಬೂಮ್ರಾ ಅವರು 8.26ರ ಸರಾಸರಿಯಲ್ಲಿ ಒಟ್ಟು 15 ವಿಕೆಟ್‌ಗಳನ್ನು ಕಬಳಿಸಿದ್ದರು. 4.17ರ ಎಕಾನಮಿ ಕಾಪಾಡಿಕೊಂಡಿದ್ದರು. ಅಲ್ಲದೆ ಸರಣಿಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದರು.
* ಸ್ಮೃತಿ ಮಂದಾನ ಅವರು ಇಂಗ್ಲೆಂಡ್‌ನ ಮಾಯಾ ಬುಷಿಯಾ ಹಾಗೂ ಶ್ರೀಲಂಕಾದ ವಿಶ್ಮಿ ಗುಣರತ್ನ ಅವರನ್ನು ಹಿಂದಿಕ್ಕಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದಿ ಬೆಂಗಳೂರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಯಲ್ಲಿ ಮಂದಾನ ಅವರು 114.33 ಸರಾಸರಿಯಲ್ಲಿ 343 ರನ್ ಗಳಿಸಿದ್ದರು.
ಬುಧವಾರ, 10 ಜುಲೈ 2024
10:54 ಪೂರ್ವಾಹ್ನ
Daily PDF
ಐಸಿಸಿ ತಿಂಗಳ ಪ್ರಶಸ್ತಿ : ಬೂಮ್ರಾ, ಸ್ಮೃತಿ ಮಂದಾನಗೆ ಒಲಿದ ಗೌರವ
Authored by:
Bhagya R K