* ಭಾರತ ತಂಡದ ವೇಗಿ ಜಸ್ ಪ್ರೀತ್ ಬುಮ್ರಾ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಟೆಸ್ಟ್ ಬೌಲರ್ ಗಳ ರ‍್ಯಾಂಕಿಂಗ್ ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ್ದಾರೆ.
* ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ ಮೊದಲ ವೇಗಿ ಬೌಲರ್ ಎಂಬ ಹೆಗ್ಗಳಿಗೆ ಜಸ್ ಪ್ರೀತ್ ಬುಮ್ರಾ ಪಾತ್ರರಾಗಿದ್ದಾರೆ.
* ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಟೀಮ್ ಇಂಡಿಯಾ, 106 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಈ ಜಯದಲ್ಲಿ ಪ್ರಮುಖ ಪಾತ್ರವಹಿಸಿದ ಭಾರತ 91 ರನ್ ಬಿಟ್ಟು ಕೊಟ್ಟು 9 ವಿಕೆಟ್ ಪಡೆದಿದು ಬುಮ್ರಾ ಅಗ್ರ ಸ್ಥಾನ ತಮ್ಮದಾಗಿಸಿಕೊಂಡರು, ಪಂದ್ಯದ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು.
* ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ವೇಗದ ಬೌಲರ್ ಒಬ್ಬರು ಟೆಸ್ಟ್ ಕ್ರಿಕೆಟ್ನ ಬೌಲಿಂಗ್ ವಿಭಾಗದ ಶ್ರೇಯಾಂಕದಲ್ಲಿ ಅಗ್ರ ಸ್ಥಾನ ಪಡೆದಿರುವುದು ಇದೇ ಮೊದಲು. ಬುಮ್ರಾ ಆ ಹಿರಿಮೆಗೆ ಪಾತ್ರರಾಗಿದ್ದಾರೆ.
* ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಟೆಸ್ಟ್ ಬೌಲರ್ ಗಳ ರ‍್ಯಾಂಕಿಂಗ್ ನಲ್ಲಿ ಬುಮ್ರಾ ಅವರು 881 ಪಾಯಿಂಟ್ ಗಳಿಂದ ಮೊದಲ ಸ್ಥಾನವನ್ನು ಪಡೆದುಕೊಂಡರು. ದಕ್ಷಿಣ ಆಫ್ರಿಕಾದ ವೇಗಿ ಕಗಿಸೊ ರಬಾಡ ಅವರು 851 ಪಾಯಿಂಟ್ ಗಳಿಂದ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ ಮತ್ತು ಆಫ್ ಸ್ಪಿನರ್ ಆರ್. ಅಶ್ವಿನ್ ಅವರು 841 ಪಾಯಿಂಟ್ ಗಳಿಂದ 3ನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಬುಮ್ರಾ ಅವರು ಆಫ್ ಸ್ಪಿನರ್ ಆರ್. ಅಶ್ವಿನ್ ಅವರನ್ನು ಹಿಂದಿಕ್ಕಿದ್ದಾರೆ.
* 30 ವರ್ಷದ ಬುಮ್ರಾ ಈ ಹಿಂದೆ 3ನೇ ಸ್ಥಾನ ಪಡೆದಿದ್ದೇ ಅವರ ಗರಿಷ್ಠ ಶ್ರೇಯಾಂಕವಾಗಿತ್ತು. ಬುಮ್ರಾ ಈ ವರ್ಷ ಆಡಿದ ಟೆಸ್ಟ್ ಪಂದ್ಯಗಳಲ್ಲಿ 2 ಬಾರಿ 5 ವಿಕೆಟ್ ಸಾಧನೆ ಮಾಡಿದ್ದಾರೆ. ವರ್ಷದ ಆರಂಭದಲ್ಲಿ ಕೇಪ್ ಟೌನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಟೆಸ್ಟ್ನಲ್ಲಿ 61 ರನ್ ನೀಡಿ 6 ವಿಕೆಟ್ ಮತ್ತು ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ 45 ರನ್ ನೀಡಿ 6 ವಿಕೆಟ್ ಉರುಳಿಸಿದ್ದಾರೆ.
* ಬ್ಯಾಟಿಂಗ್ ವಿಭಾಗದಲ್ಲಿ ಕೇನ್ ವಿಲಿಯಮ್ಸನ್ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ. ಸ್ಟೀವ್ ಸ್ಮಿತ್ ಎರಡನೇ ಸ್ಥಾನ ಪಡೆದಿದ್ದರೆ, ಇನ್ನು ಎರಡನೇ ಸ್ಥಾನದಲ್ಲಿದ್ದ ಜೋ ರೂಟ್, ಭಾರತದ ವಿರುದ್ಧ ಕಳಪೆ ಪ್ರದರ್ಶನ ನೀಡಿದ್ದು 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ಡೇರಿಲ್ ಮಿಚೆಲ್, ಬಾಬರ್ ಅಜಮ್, ಉಸ್ಮಾನ್ ಖವಾಜ ಕ್ರಮವಾಗಿ 4, 5, 6ನೇ ಸ್ಥಾನ ಪಡೆದಿದ್ದಾರೆ. ವಿರಾಟ್ ಕೊಹ್ಲಿ ಮೊದಲನೇ ಸ್ಥಾನದಿಂದ ಕುಸಿದು 7ನೇ ಸ್ಥಾನದಲ್ಲಿದ್ದಾರೆ. ರಿಷಭ್ ಪಂತ್ 12, ರೋಹಿತ್ ಶರ್ಮಾ 13ನೇ ಶ್ರೇಯಾಂಕದಲ್ಲಿದ್ದಾರೆ.
ಐಸಿಸಿ ಟೆಸ್ಟ್ ಬೌಲರ್ ಗಳ ರ‍್ಯಾಂಕಿಂಗ್ ನಲ್ಲಿ ಬುಮ್ರಾ ನಂ.1
Published by Akshata Halli
08 ಫೆಬ್ರವರಿ 2024