* ಉಕ್ಕಿನ ಮನುಷ್ಯ ಎಂದೇ ಖ್ಯಾತಿಯಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವಾದ ಅಕ್ಟೋಬರ್ 31 ಅನ್ನು ಪ್ರತಿ ವರ್ಷ ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತದೆ.
* ದೇಶದ ಏಕತೆಗಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನಡೆಸಿದ ಹೋರಾಟ ಮತ್ತು ಅವರು ನೀಡಿದ ಸಂದೇಶವನ್ನು ಸಾರುವ ಜೊತೆಗೆ ಪಟೇಲ್ ಅವರಿಗೆ ಸೂಕ್ತ ಗೌರವ ನೀಡಲು ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಕರೆ ಕೊಟ್ಟರು. ಅಂದಿನಿಂದ ಪ್ರತಿವರ್ಷ ಅ. 31ರಂದು ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ದೇಶದ ಎಲ್ಲ ಪ್ರಜೆಗಳು, ದೇಶದ ಒಳಿತಿಗಾಗಿ ಒಗ್ಗೂಡಿ ಕೆಲಸ ಮಾಡುವುದು ಈ ದಿನದ ಆಚರಣೆಯ ಉದ್ದೇಶವಾಗಿದೆ
* 2018ರಲ್ಲಿ ಪಟೇಲ್ ಅವರ 182 ಮೀಟರ್ ಉದ್ದದ ಉಕ್ಕಿನ ಪ್ರತಿಮೆಯನ್ನು ಅಹಮದಾಬಾದ್ ನಿಂದ 200 ಕಿ.ಮೀ. ದೂರದಲ್ಲಿರುವ ಸರ್ದಾರ್ ಸರೋವರ ಆಣೆಕಟ್ಟಿನ ಬಳಿ ನಿರ್ಮಿಸಲಾಗಿದೆ.
ಗುರುವಾರ, 31 ಅಕ್ಟೋಬರ್ 2024
11:02 ಪೂರ್ವಾಹ್ನ
Daily PDF
ಅಕ್ಟೋಬರ್ 31 : ರಾಷ್ಟ್ರೀಯ ಏಕತಾ ದಿನ
Authored by:
Yallamma G