* ಭಾರತದ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಮೆರಿಕಕ್ಕೆ ಭಾರತದ ರಾಯಭಾರಿಯಾಗಿ ವಿನಯ್ ಮೋಹನ್ ಕ್ವಾತ್ರಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
* ನಿವೃತ್ತ ವಿದೇಶಾಂಗ ಕಾರ್ಯದರ್ಶಿಯಾಗಿರುವ ಕ್ವಾತ್ರಾ ಅವರು ಅಮೆರಿಕದ ರಾಜಧಾನಿ ತಲುಪಿದ್ದಾರೆ. ತರಣ್‌ಜೀತ್ ಸಿಂಗ್ ಸಂಧು ಅವರು ಜನವರಿಯಲ್ಲಿ ನಿವೃತ್ತರಾದ ಬಳಿಕ ಖಾಲಿ ಇದ್ದ ರಾಯಭಾರಿ ಹುದ್ದೆಗೆ ಭಾರತವು ಜುಲೈ 19ರಂದು ಕ್ವಾತ್ರಾ ಅವರನ್ನು ನೇಮಿಸಿತ್ತು.
* 61 ವರ್ಷ ವಯಸ್ಸಿನ ಕ್ವಾತ್ರಾ ಅವರು ಇತ್ತೀಚಿನವರೆಗೂ ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ (Foreign Secretary) ಕೆಲಸ ನಿರ್ವಹಿಸಿದ್ದರು. ಇದಕ್ಕೂ ಮುನ್ನ ಕ್ವಾತ್ರಾ ಅವರು ಫ್ರಾನ್ಸ್ ಮತ್ತು ನೇಪಾಳಕ್ಕೆ ಭಾರತದ ರಾಯಭಾರಿಯಾಗಿದ್ದರು. ನಂತರ ಅವರನ್ನು ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಕಳೆದ ಜುಲೈ 14 ರಂದು ವಿದೇಶಾಂಗ ಸೇವೆಯಿಂದ ನಿವೃತ್ತರಾಗಿದ್ದರು.
* ಭಾರತದ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಲು ಖುಷಿಯಾಗುತ್ತಿದೆ. ಎರಡು ದೇಶಗಳ ನಡುವಿನ ಬಾಂಧವ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಯಭಾರ ಕಚೇರಿಯ ತಂಡವು ತನ್ನ ಕೆಲಸವನ್ನು ಮುಂದುವರಿಸಲಿದೆ' ಎಂದು ಕ್ವಾತ್ರಾ 'ಎಕ್ಸ್'ನಲ್ಲಿ ತಿಳಿಸಿದ್ದಾರೆ.
ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ಮೋಹನ್ ಕ್ವಾತ್ರಾ ಅಧಿಕಾರ ಸ್ವೀಕಾರ
Published by Jyoti Angadi
15 ಆಗಸ್ಟ್ 2024