* ಪ್ರಸ್ತುತ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದ್ದು, ಇದನ್ನೂ ಮೀರಿಸುವಂತಹ ಸ್ಟೇಡಿಯಂ ನಿರ್ಮಿಸಲು ಎಸಿಎ ನಿರ್ಧರಿಸಿದೆ. * ಈ ಕ್ರಿಕೆಟ್ ಸ್ಟೇಡಿಯಂ 200 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದ್ದು, ಇದಕ್ಕಾಗಿ ಆಂಧ್ರ ಪ್ರದೇಶ ರಾಜ್ಯ ಸರ್ಕಾರದಿಂದ ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ನೆರವು ಕೋರಿದೆ.* ಆಂಧ್ರಪ್ರದೇಶದ ಅಮರಾವತಿ ಕ್ರಿಕೆಟ್ ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ಅಮರಾವತಿಯಲ್ಲಿ 1.32 ಲಕ್ಷಕ್ಕೂ ಹೆಚ್ಚು ಆಸನ ಸಾಮರ್ಥ್ಯದೊಂದಿಗೆ 800 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಕ್ರೀಡಾಂಗಣವನ್ನು ನಿರ್ಮಿಸುವ ಯೋಜನೆಯನ್ನು ಪ್ರಕಟಿಸಿದೆ.* ವಿಶ್ವದ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿರುವ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಒಟ್ಟು 1.32 ಲಕ್ಷ ಆಸನಗಳ ವ್ಯವಸ್ಥೆಯಿದೆ. ಇದೀಗ ಇದಕ್ಕಿಂತಲೂ ದೊಡ್ಡ ಸ್ಟೇಡಿಯಂ ನಿರ್ಮಿಸಲು ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ಪ್ಲ್ಯಾನ್ ರೂಪಿಸಿದೆ. * ಈ ಯೋಜನೆಯಂತೆ ಹೊಸ ಕ್ರೀಡಾಂಗಣದಲ್ಲಿ 1.50 ಲಕ್ಷ ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಇರಲಿದೆ ಎಂದು ವರದಿಯಾಗಿದೆ. ಇದಕ್ಕಾಗಿ ಆಂಧ್ರ ಪ್ರದೇಶ ರಾಜ್ಯ ಸರ್ಕಾರದಿಂದ ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ನೆರವು ಕೋರಿದೆ.* ಈ ಯೋಜನೆಯ ಅನುಷ್ಠಾನಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯಿಂದ ಹಣಕಾಸಿನ ನೆರವು ಪಡೆಯಲು ಎಸಿಎ ಯೋಜಿಸಿದೆ. ಎಸಿಎ 2029 ರ ವೇಳೆಗೆ ರಾಷ್ಟ್ರೀಯ ಕ್ರೀಡಾಕೂಟವನ್ನು ಆಯೋಜಿಸುವ ಗುರಿಯನ್ನು ಹೊಂದಿದ್ದು, ಇದರ ಜೊತೆ ರಾಜ್ಯದಲ್ಲಿ ಕ್ರಿಕೆಟ್ನ ಮತ್ತಷ್ಟು ಅಭಿವೃದ್ಧಿಗೆ ಮುಂದಾಗಲಿದ್ದೇವೆ ಎಂದು ತಿಳಿಸಿದ್ದಾರೆ.