* ಅನ್ನಭಾಗ್ಯ ಯೋಜನೆಯನ್ನು ಪ್ರಶಂಸಿಸುತ್ತ 'ಅನ್ನ ಸುವಿಧಾ ಯೋಜನೆ' ಎಂಬ ಹೊಸ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 16 ರಂದು ಬಜೆಟ್ ನಲ್ಲಿ ಘೋಷಣೆ ಮಾಡಿದರು.
* ಅನ್ನ ಸುವಿಧಾ ಎಂಬ ಹೊಸ ಯೋಜನೆಯು ಹೋಮ್ ಡೆಲಿವರಿ ಆಪ್ ಮೂಲಕ 80 ವರ್ಷದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ವ್ಯವಸ್ಥೆಯಾಗಿದೆ.
* ರಾಜ್ಯದ ಅಂದಾಜು 80,000 ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗುತ್ತದೆ.
* ಅನ್ನಭಾಗ್ಯ ಯೋಜನೆಯಡಿ 2024ರ ಜನವರಿ ಅಂತ್ಯದ ವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ ಎಂದೂ ಸಿಎಂ ಬಜೆಟ್ನಲ್ಲಿ ತಿಳಿಸಿದರು.
* ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಕುರಿತಾದ ವಿವರ ನೀಡುತ್ತ, ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಕನಸಿನೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಉಚಿತ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿತ್ತು.
'ಅನ್ನ ಸುವಿಧಾ ಯೋಜನೆ' ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ
Published by Bhagya R K
17 ಫೆಬ್ರವರಿ 2024