* ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ಮ್ಯಾಥ್ಯೂ ವೇಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಪ್ರತಿನಿಧಿಸಿದ್ದ 34 ವರ್ಷದ ಮ್ಯಾಥ್ಯೂ ವೇಡ್ 13 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
*  ಆಸ್ಟ್ರೇಲಿಯಾ ತಂಡದ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಂಡಿದ್ದ ಮ್ಯಾಥ್ಯೂ ವೇಡ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 4682 ರನ್ ಕಲೆಹಾಕಿದ್ದಾರೆ. 5 ಶತಕ ಹಾಗೂ 19 ಅರ್ಧಶತಕಗಳನ್ನು ಬಾರಿಸಿದ್ದಾರೆ ಮತ್ತು 36 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 
* ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದ ವೇಡ್ 2021 ರಲ್ಲಿ ಆಸೀಸ್ ಪಡೆ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
* ಫೆಬ್ರವರಿ 2012 ರಲ್ಲಿ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ವೇಡ್ 97 ಏಕದಿನ ಪಂದ್ಯಗಳನ್ನಾಡಿ1867 ರನ್ ಕಲೆಹಾಕಿದ್ದಾರೆ.  ಜುಲೈ 2021 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಬಾರಿ 50 ಓವರ್​ಗಳ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು.
* ಮ್ಯಾಥ್ಯೂ ವೇಡ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನವು ಅಕ್ಟೋಬರ್ 2011 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದೊಂದಿಗೆ ಶುರುವಾಗಿತ್ತು. ಅಂದಿನಿಂದ ಜೂನ್ 2024 ರವರೆಗೆ ಅವರು 92 ಟಿ20 ಪಂದ್ಯಗಳನ್ನಾಡಿ ಒಟ್ಟು 1202 ರನ್ ಗಳಿಸಿದ್ದಾರೆ.
* ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಮ್ಯಾಥ್ಯೂ ವೇಡ್ ರಾಷ್ಟ್ರೀಯ ತಂಡದೊಂದಿಗೆ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ. ಅಂದರೆ ಮುಂದಿನ ತಿಂಗಳು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಟಿ20 ಸರಣಿ ವೇಳೆ ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪಿಂಗ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ವೇಡ್ ಕಾರ್ಯ ನಿರ್ವವಹಿಸಲಿದ್ದಾರೆ. ಈ ಮೂಲಕ ನಿವೃತ್ತಿ ಬೆನ್ನಲ್ಲೇ ಮ್ಯಾಥ್ಯೂ ವೇಡ್ ಸಹಾಯಕ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸುತ್ತಿರುವುದು ವಿಶೇಷ.