* ಕಲ್ಪತರುನಾಡಿನ ಜನರು, ಕ್ರೀಡಾಪಟುಗಳು ಹಾಗೂ ಕ್ರೀಡಾಪ್ರೇಮಿಗಳ ಹಲವು ವರ್ಷಗಳ ಬೇಡಿಕೆಯಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2 ರಂದು ಶಿಲಾನ್ಯಾಸ ನೆರವೇರಿಸುವ ಮೂಲಕ ಚಾಲನೆ ನೀಡಿದರು.
* ನಗರದ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಇರುವ ಪಿ.ಗೊಲ್ಲಹಳ್ಳಿ-ಸೋರೆಕುಂಟೆ ಬಳಿ ಸುಮಾರು 50 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಿದರು.
* ಬ್ಯಾಟಿಂಗ್ ಮಾಡುವ ಮೂಲಕ ತುಮಕೂರಿ ಜಿಲ್ಲೆಯ ಸೋರೆಕುಂಟೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.
* ಸುಮಾರು 150 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತಿದೆ. ಕೆಐಎಡಿಬಿ ವತಿಯಿಂದ ಕೆಎಸ್‌ಸಿಎನವರು 50 ಎಕರೆ ಭೂಮಿಯನ್ನು ಖರೀದಿಸಿದ್ದು, ಮುಂದಿನ ಎರಡು ವರ್ಷದೊಳಗೆ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದರು.
ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
Published by Bhagya R K
03 ಡಿಸೆಂಬರ್ 2024