* ಇಂಗ್ಲೆಂಡ್ ತಂಡದ ಹಿರಿಯ ವೇಗಿ ಜೇಮ್ಸ್ ಆ್ಯಂಡರ್ಸನ್ ಅವರು ತಮ್ಮ 22 ವರ್ಷಗಳ ಸುದೀರ್ಘ ಅಂತಾರಾಷ್ಟೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ತಿಳಿಸಿದ್ದಾರೆ.
* ವೆಸ್ಟ್ ಇಂಡೀಸ್ ವಿರುದ್ಧ ಜುಲೈ 12 ರಂದು (ಶುಕ್ರವಾರ) ಮುಕ್ತಾಯಗೊಂಡ ಟೆಸ್ಟ್ ಪಂದ್ಯ ಅವರಿಗೆ ಕೊನೆಯ ಪಂದ್ಯವಾಯಿತು. ಈ ಪಂದ್ಯವನ್ನು ಇಂಗ್ಲೆಂಡ್ ಇನಿಂಗ್ಸ್ ಹಾಗೂ 114 ರನ್ಗಳಿಂದ ಗೆದ್ದು ಬೀಗಿತು.
* ಆ್ಯಂಡರ್ಸನ್ ಇಂಗ್ಲೆಂಡ್ ಪರ ಅತಿ ಹೆಚ್ಚು ವಿಕೆಟ್ ಪಡೆದ, ಟೆಸ್ಟ್ ಕ್ರಿಕೆಟ್‌ನಲ್ಲಿ 700ಕ್ಕೂ ಅಧಿಕ ವಿಕೆಟ್ ಪಡೆದ ವಿಶ್ವದ ಮೊದಲ ವೇಗಿ ಹಾಗೂ ಒಟ್ಟಾರೆ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.
* ದ್ವಿತೀಯ ಇನಿಂಗ್ಸ್ನಲ್ಲಿ 10 ಓವರ್ ಪೂರ್ತಿಗೊಳಿಸುವ ಮೂಲಕ ಜೇಮ್ಸ್ ಆ್ಯಂಡರ್ಸನ್ ಅವರು 40 ಸಾವಿರ ಚೆಂಡೆಸೆದ ದಾಖಲೆ ನಿರ್ಮಿಸಿದರು.
* ಅತಿ ಹೆಚ್ಚು ಎಸೆತಗಳನ್ನು ಎಸೆದ ವಿಶ್ಚ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಮುರಳೀಧರನ್ ಅವರು 44039 ಎಸೆತಗಳೊಂದಿಗೆ ಮೊದಲನೇ ಸ್ಥಾನದಲ್ಲಿದ್ದರೆ. ಕನ್ನಡಿಗ ಅನಿಲ್ ಕುಂಬ್ಳೆ 40850 ಎಸೆತಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರೆ. ಇವರ ನಂತರದ ಸ್ಥಾನವನ್ನು ಜೇಮ್ಸ್ ಆ್ಯಂಡರ್ಸನ್ ಪಡೆದುಕೊಂಡಿದ್ದಾರೆ.
* 2003ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್ಸನ್ ಅವರು ಇದುವರಿಗೆ 188 ಪಂದ್ಯಗಳಲ್ಲಿ 704 ವಿಕೆಟ್ ಗಳಿಸಿದ್ದಾರೆ. ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಆ್ಯಂಡರ್ಸನ್ ಮೂರನೇ ಸ್ಥಾನದಲ್ಲಿದ್ದಾರೆ. ಮುತ್ತಯ್ಯ ಮುರಳೀದರನ್ ಅವರು (800) ಮೊದಲನೇ ಸ್ಥಾನ ಮತ್ತು ಶೇನ್ ವಾರ್ನ್ ಅವರು (708) ಎರಡನೇ ಸ್ಥಾನದಲ್ಲಿದ್ದರೆ.
ಶನಿವಾರ, 13 ಜುಲೈ 2024
10:53 ಪೂರ್ವಾಹ್ನ
Daily PDF
ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ತಿಳಿಸಿದ ವೇಗಿ ಜೇಮ್ಸ್ ಆಂಡರ್ಸನ್
Authored by:
Yallamma G