* ಆಗ್ನೇಯ ಹಾಗೂ ಅರಬಿ ಸಮುದ್ರದ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದು ಚಂಡಮಾರುತವಾಗಿ ಮಾರ್ಪಡುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
* ಅಕ್ಟೋಬರ್ 21ರಂದು ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಕರಾವಳಿ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆ ಇದೆಯೆಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಚಂಡಮಾರುತಕ್ಕೆ 'ತೇಜ್' ಎಂದು ಹೆಸರಿಡಲಾಗಿದ್ದು, ಈ ವರ್ಷದಲ್ಲಿ ಅರಬಿ ಸಮುದ್ರದಲ್ಲಿ ಸೃಷ್ಟಿಯಾದ ಎರಡನೇ ಚಂಡಮಾರುತ ಇದಾಗಿದೆ.
* ಚಂಡಮಾರುತ ಸೃಷ್ಟಿಯಾದರೆ ಗಾಳಿಯ ವೇಗವು ಗಂಟೆಗೆ 62ರಿಂದ 88 ಕಿ. ಮೀ. ಆಗಲಿದೆ.
* ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾದ್ದರಿಂದ ಕೇರಳ, ತಮಿಳುನಾಡು ಹಾಗೂ ಕರ್ನಾಟಕದ ಕೆಲ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.
* ಕರ್ನಾಟಕದ ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶನಿವಾರ, 21 ಅಕ್ಟೋಬರ್ 2023
12:00 ಅಪರಾಹ್ನ
Daily PDF
ಅರಬಿ ಸಮುದ್ರದಲ್ಲಿ ತೇಜ್ ಚಂಡಮಾರುತ ಸೃಷ್ಟಿ
Authored by:
Yallamma G