* ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದಲ್ಲಿ ಭಾರತೀಯ ಸೇನೆಯ ಬೊಮ್ಮಿಲಾ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಚೀತಾ ಹೆಲಿಕಾಪ್ಟರ್ ಮಾರ್ಚ್ 16 ರಂದು  ಪತನಗೊಂಡಿದೆ.
* ಜಿಲ್ಲೆಯ ಸಂಗೆ ಗ್ರಾಮದಿಂದ ಬೆಳಗ್ಗೆ 9 ಗಂಟೆಗೆ ಹೆಲಿಕಾಪ್ಟರ್ ಟೇಕಾಫ್ ಆಗಿದ್ದು, ಅಸ್ಸಾಂನ ಸೋನಿತ್‌ಪುರ ಜಿಲ್ಲೆಯ ಮಿಸ್ಸಮರಿ ಕಡೆಗೆ ತೆರಳುತ್ತಿತ್ತು. ಬೆಳಗ್ಗೆ 9.15ಕ್ಕೆ ಏರ್ ಟ್ರಾಫಿಕ್ ಕಂಟ್ರೋಲ್‌ನೊಂದಿಗೆ (ATC) ಸಂಪರ್ಕ ಕಳೆದುಕೊಂಡಿದ್ದರಿಂದ ಮಂಡಲ ಪ್ರದೇಶದಲ್ಲಿ ಅಪಘಾತ ಸಂಭವಿಸಿತ್ತು ಎಂದು ಗುವಾಹಟಿ ರಕ್ಷಣಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ದೃಢಪಡಿಸಿದ್ದರು.