* ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ತೊರೆದಿದ್ದಾರೆ. ಈ ಮೂಲಕ ಹಸೀನಾ ಅವರ ಸತತ 15 ವರ್ಷಗಳ ಸುದೀರ್ಘ ಆಡಳಿತ ಅಂತ್ಯವಾಗಿದೆ.
* ಈವರೆಗಿನ ಮಾಹಿತಿ ಪ್ರಕಾರ ಈ ಹಿಂಸಾಚಾರದಲ್ಲಿ ಬಾಂಗ್ಲಾ ದೇಶಾದ್ಯಂತ ಸುಮಾರು 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದಾಗಿ ಶೇಖ್ ಹಸೀನಾ ಅವರು ಸುರಕ್ಷಿತ ಸ್ಥಳಕ್ಕೆ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
* ಬಾಂಗ್ಲಾ ದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಹಾಗೂ ಶೇಖ್ ಹಸೀನಾ ಅವರೂ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಬಾಂಗ್ಲಾ ದೇಶದಲ್ಲಿ ಸೇನಾಡಳಿತ ಜಾರಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಬಾಂಗ್ಲಾ ದೇಶದ ಮಾಧ್ಯಮಗಳೂ ವರದಿ ಮಾಡುತ್ತಿವೆ. ಸೇನಾಡಳಿತ ಜಾರಿ ಬಳಿಕ ಸೇನಾ ಮುಖ್ಯಸ್ಥರು ದೇಶವನ್ನುದ್ದೇಶಿಸಿ ಮಾತನಾಡಲಿದ್ಧಾರೆ.
* ಕೆಲವೇ ದಿನಗಳ ಹಿಂದೆ, 1971 ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಯೋಧರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ 30 ಪ್ರತಿಶತವನ್ನು ಮೀಸಲಿಡುವ ವಿವಾದಾತ್ಮಕ ಕೋಟಾ ವ್ಯವಸ್ಥೆಯನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಆರಂಭವಾಗಿತ್ತು.
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ
Published by Yallamma G
06 ಆಗಸ್ಟ್ 2024