* ಬಾಂಗ್ಲಾದೇಶದ ಆಲ್ರೌಂಡರ್ ಶಕೀಬ್ ಅಲ್ ಹಸನ್ ಟೆಸ್ಟ್ ಮತ್ತು ಟಿ20 ಕ್ರಿಕೆಟ್​ಗೆ  ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
* ಬಾಂಗ್ಲಾದೇಶ್ ಪರ ಈವರೆಗೆ 70 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ 128 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 7454 ಎಸೆತಗಳನ್ನು ಎದುರಿಸಿರುವ ಅವರು 4600 ರನ್ ಕಲೆಹಾಕಿದ್ದಾರೆ.
* 119 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ 15591 ಎಸೆತಗಳಲ್ಲಿ ಈ ವೇಳೆ 7707 ರನ್​ಗಳನ್ನು ನೀಡಿ 242 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೇ ವೇಳೆ 19 ಬಾರಿ 5 ವಿಕೆಟ್​ಗಳನ್ನು ಕಬಳಿಸಿದ ಸಾಧನೆ ಮಾಡಿದ್ದಾರೆ. ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದರ ನಡುವೆ 5 ಶತಕ, 1 ದ್ವಿಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ.
* ಭಾರತದ ವಿರುದ್ಧದ ಕಾನ್ಪುರ ಟೆಸ್ಟ್​ಗೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಕೀಬ್ ಮುಂಬರುವ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳುವುದಾಗಿ ತಿಳಿಸಿದ್ದಾರೆ. ಅಲ್ಲದೆ ಇನ್ಮುಂದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯುವುದಿಲ್ಲ ಎಂದು ಸಹ ಹೇಳಿದ್ದಾರೆ.
* 2024ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ನಾನು ಬಾಂಗ್ಲಾದೇಶ್ ಪರವಾಗಿ ನನ್ನ ಕೊನೆಯ ಟಿ20 ಪಂದ್ಯವನ್ನು ಆಡಿದ್ದೇನೆ. ಹೀಗಾಗಿ ಮುಂಬರುವ ದಿನಗಳಲ್ಲಿ ಬಾಂಗ್ಲಾ ಪರ ಚುಟುಕು ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸುದೀರ್ಘಾವಧಿಯ ಕ್ರಿಕೆಟ್​ನಲ್ಲಿ ನನ್ನ ಕೊನೆಯ ಪಂದ್ಯವನ್ನಾಡಲಿದ್ದೇನೆ ಎಂದು ಶಕೀಕ್ ಅಲ್ ಹಸನ್ ತಿಳಿಸಿದ್ದಾರೆ. 
* ಅಕ್ಟೋಬರ್-ನವೆಂಬರ್ ನಡುವೆ ಬಾಂಗ್ಲಾದೇಶ್ ತಂಡವು ಸೌತ್ ಆಫ್ರಿಕಾ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ ಸರಣಿಯಲ್ಲಿ ಮೀರತ್​ನಲ್ಲಿ ಒಂದು ಪಂದ್ಯ ಜರುಗಲಿದ್ದು, ಈ ಮ್ಯಾಚ್ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಗುಡ್ ಬೈ ಹೇಳಲು ಶಕೀಬ್ ಅಲ್ ಹಸನ್ ನಿರ್ಧರಿಸಿದ್ದಾರೆ.