* ಹಾಲಿ ಚಾಂಪಿಯನ್ ಭಾರತ ಮಹಿಳೆಯರ ಕ್ರಿಕೆಟ್ ತಂಡವು ಟಿ20 ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಗೆ ತಲುಪಿದೆ.
* ರಣಗಿರಿ ದಂಬುಲಾ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜುಲೈ 26ರಂದು ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ಸೆಮಿಫೈನಲ್ ಪಂದ್ಯದಲ್ಲಿ ರೇಣುಕಾ ಸಿಂಗ(10ಕ್ಕೆ3) ಮತ್ತು ರಾಧಾ ಯಾದವ್(14ಕ್ಕೆ3) ಅವರ ಅಮೋಘ ಬೌಲಿಂಗ್ ಪ್ರದರ್ಶನದಿಂದ ಭಾರತ ತಂಡವು ಬಾಂಗ್ಲಾದೇಶವನ್ನು 10 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಫೈನಲ್‌ಗೆ ಲಗ್ಗೆಯಿಟ್ಟಿತು.
* ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಬಾಂಗ್ಲಾದೇಶವು ಭಾರತಕ್ಕೆ 81 ರನ್ಗಳ ಗೆಲುವಿನ ಟಾರ್ಗೆಟ್ ನೀಡಿತ್ತು. ಇದಕ್ಕೆ ಉತ್ತರವಾಗಿ ಭಾರತ 11 ಓವರ್‌ಗಳಲ್ಲಿ 83 ರನ್ ಗಳಿಸುವ ಮೂಲಕ 10 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತ್ತು.
* ಬಾಂಗ್ಲಾದೇಶ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸ್ಫೋಟಕ ಪ್ರದರ್ಶನ ನೀಡಿದ ರೇಣುಕಾ ಸಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
* ಭಾರತ ತಂಡವು ಕಳೆದ ನಾಲ್ಕು ಟಿ20 ಏಷ್ಯಾ ಕಪ್ ಟೂರ್ನಿಗಳಲ್ಲಿ ಮೂರು ಬಾರಿ ಚಾಂಪಿಯನ್ ಆಗಿದೆ. ಇದೀಗ ನಾಲ್ಕನೇ ಪ್ರಶಸ್ತಿಯತ್ತ ಚಿತ್ತ ನೆಟ್ಟಿದೆ.
* ಮತ್ತೊಂದು ರೋಚಕ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ತಂಡವು ಮೂರು ವಿಕೆಟ್‌ಗಳಿಂದ ಪಾಕಿಸ್ಥಾನ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತು.
* ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತೀಯ ಕ್ರಿಕೆಟ್ ತಂಡವು 2024ರ ಮಹಿಳಾ ಏಷ್ಯಾ ಕಪ್ನ ಅಂತಿಮ ಪಂದ್ಯವನ್ನು ಜುಲೈ 28ರಂದು ಶ್ರೀಲಂಕಾವನ್ನು ಎದುರಿಸಲಿದೆ.
ಬಾಂಗ್ಲಾದೇಶವನ್ನು 10 ವಿಕೆಟ್‌ಗಳಿಂದ ಸೋಲಿಸಿ ಮಹಿಳಾ ಟಿ20 ಏಷ್ಯಾಕಪ್ ಫೈನಲ್‌ಗೆ ಪ್ರವೇಶಿಸಿದ ಭಾರತ
Published by Jyoti Angadi
27 ಜುಲೈ 2024