* 2023-24ನೇ ಸಾಲಿನ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ನಿರ್ದೇಶಕ ಎಂ ಎಸ್ ಸತ್ಯು ಅವರನ್ನು ಕರ್ನಾಟಕ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.
* ಮಾರ್ಚ್ 7 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಿರಿಯ ನಿರ್ದೇಶಕ ಎಂ ಎಸ್ ಸತ್ಯು ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
* ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ ಎಸ್ ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ‘ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
* ಅವರ ನಿರ್ದೇಶನದ ಹಿಂದಿ ಚಿತ್ರ ‘ಗರಂ ಹವಾ’ ಹಲವಾರು ರಾಷ್ಟ್ರೀಯ - ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದರೆ ಕನ್ನಡದ 'ಬರ' ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದರು.
* ಎಂ ಎಸ್ ಸತ್ಯು ಅವರು ಜುಲೈ 6, 1930 ರಂದು ಜನಿಸಿದವರು (ಮೈಸೂರು ಶ್ರೀನಿವಾಸ ಸತ್ಯು). ಕನ್ನಡದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಸತ್ಯು ಅವರು ಮೈಸೂರು ಹಾಗೂ ಬೆಂಗಳೂರಿನಲ್ಲಿ ಶಿಕ್ಷಣ ಪಡೆದುಕೊಂಡಿದ್ದರು.
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಿರ್ದೇಶಕ ಎಂ ಎಸ್ ಸತ್ಯು ಆಯ್ಕೆ
Published by Bhagya R K
06 ಮಾರ್ಚ್ 2024