* 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯನ್ನಾಗಿ ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್ ಜಿ. ಅವರನ್ನು ಆಯ್ಕೆ ಮಾಡಲಾಗಿದೆ.
* ಮಾರ್ಚ್ 1ರಿಂದ 8ರ ತನಕ 2024-2025ನೇ ಸಾಲಿನ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (BIFFES) ಬೆಂಗಳೂರಿನಲ್ಲಿ ನಡೆಯಲಿದೆ. ನಟ ಕಿಶೋರ್ ಕನ್ನಡ ಮಾತ್ರವಲ್ಲದೇ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಬೆಂಗಳೂರು ಫಿಲ್ಮ್ ಫೆಸ್ಟಿವಲ್ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಿದೆ.
* ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವ ಆಗಿದೆ. ಸುಮಾರು 60 ದೇಶಗಳ ಸಿನಿಮಾಗಳು, ಚಿತ್ರೋತ್ಸವದಲ್ಲಿ ಭಾಗವಹಿಸಲಿವೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳ 200 ಚಲನಚಿತ್ರಗಳು 13 ಚಿತ್ರಮಂದಿರಗಳಲ್ಲಿ 400 ಪ್ರದರ್ಶನಗೊಳ್ಳಲಿವೆ.
* ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು 'ಸರ್ವ ಜನಾಂಗದ ಶಾಂತಿಯ ತೋಟ' ಶೀರ್ಷಿಕೆಯಡಿ ನಡೆಯಲಿದೆ.
ಶುಕ್ರವಾರ, 10 ಜನವರಿ 2025
10:51 ಪೂರ್ವಾಹ್ನ
Daily PDF
ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಕಿಶೋರ್ ರಾಯಭಾರಿಯಾಗಿ ಆಯ್ಕೆ
Authored by:
Bhagya R K