* ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಒತ್ತಡ ಕಡಿಮೆ ಮಾಡಲು ಉನ್ನತ ಶಿಕ್ಷಣದಲ್ಲಿ ಓಪನ್ ಬುಕ್ ಪರೀಕ್ಷೆ ಪರಿಚಯಿಸಬೇಕು ಎಂದು ತಜ್ಞರ ಸಮಿತಿ ಶಿಫಾರಸು ಮಾಡಿದೆ.
* 2023ರ ಜುಲೈನಲ್ಲಿ ಪಿಇಎಸ್ ವಿಶ್ವವಿದ್ಯಾನಿಲಯದ ಬಿ.ಟೆಕ್ ವಿದ್ಯಾರ್ಥಿ ಆದಿತ್ಯಪ್ರಭು ಅತ್ಮಹತ್ಯೆ ಮಾಡಿಕೊಂಡ ನಂತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಶೈಕ್ಷಣಿಕ ಒತ್ತಡ ಕುರಿತು ಅಧ್ಯಯನ ಮಾಡಿ ವರದಿ ನೀಡಲು ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಸ್.ಎಂ. ಜಯಕರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.
* ನಕಲು ಮಾಡುವಾಗ ಸಿಕ್ಕಿಬಿದ್ದ ಕಾರಣಕ್ಕೆ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಗಳಿಂದ ದೃಢಪಟ್ಟಿದೆ. ಇಂತಹ ಅವಘಡ ತಪ್ಪಿಸಲು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣ ಮಾಡಬೇಕಿದೆ.
* ಮುಕ್ತ ವಾತಾವರಣದಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಲ್ಲಿ ಅತ್ಮವಿಶ್ವಾಸ ಮೂಡಿಸಲು 'ಓಪನ್ ಬುಕ್' ಪರೀಕ್ಷಾ ವಿಧಾನ ಸಹಕಾರಿಯಾಗಿದೆ. ವಿಭಾಗಗಳಲ್ಲೂ ಇಂತಹ ಸಾಧ್ಯತೆಗಳನ್ನು ಪರಿಶೀಲಿಸಲು ಪ್ರತ್ಯೇಕ ಸಮಿತಿ ರಚಿಸುವಂತೆ ಉನ್ನತ ಶಿಕ್ಷಣ ಇಲಾಖೆಗೆ ಸಲಹೆ ನೀಡಿದೆ.
* ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಈಗಾಗಲೇ ಎಂಜಿನಿಯರಿಂಗ್ ಪರೀಕ್ಷೆಗಳಿಗೆ 'ಓಪನ್ ಬುಕ್' ವ್ಯವಸ್ಥೆಯನ್ನು ಪರಿಚಯಿಸಿದೆ.
* 'ಓಪನ್ ಬುಕ್ ಪರೀಕ್ಷೆಯಲ್ಲೂ ವಿದ್ಯಾರ್ಥಿಗಳು ಮನಸ್ಸು ಕೇಂದ್ರೀಕರಿಸಬೇಕಾಗುತ್ತದೆ. ಅಧ್ಯಯನ ಮಾಡಿರಬೇಕಾಗುತ್ತದೆ. ಸಮಿತಿಯ ವರದಿ ಸ್ವೀಕರಿಸಲಾಗಿದೆ. ಸಂಪೂರ್ಣ ಓದಿದ ನಂತರ ಶಿಫಾರಸುಗಳ ಕುರಿತು ಅಧಿಕಾರಿಗಳ ಜೊತೆ ಚರ್ಚಿ ಸಲಾಗುವುದು' ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ತಿಳಿಸಿದ್ದಾರೆ.
ಬುಧವಾರ, 03 ಜನವರಿ 2024
5:32 ಅಪರಾಹ್ನ
Daily PDF
ಬೆಂಗಳೂರು ವಿ.ವಿ : ಆತ್ಮಹತ್ಯೆ ತಡೆಗೆ ಓಪನ್ ಬುಕ್ ಪರೀಕ್ಷೆ
Authored by:
Yallamma G