* ನಂದಿಬೆಟ್ಟದಲ್ಲಿ ಬುಧವಾರ(ಜುಲೈ 02) ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಾಮಬದಲಾವಣೆಗಳಿಗೆ ತೀರ್ಮಾನವಾಯಿತು. ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿಯಾಗಿ ಬದಲಾವಣೆಗೆ ತೀರ್ಮಾನವಾಯಿತು.
* ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯಾಗಿ ಹಾಗೂ ಬಾಗೇಪಲ್ಲಿ ತಾಲ್ಲೂಕು ಕೇಂದ್ರದ ಹೆಸರನ್ನು ಭಾಗ್ಯನಗರ ಎಂದು ಬದಲಾಯಿಸಲು ನಿರ್ಣಯಿಸಲಾಯಿತು.
* ಸಭೆಯಲ್ಲಿ ಒಟ್ಟು 48 ವಿಷಯಗಳು ಚರ್ಚೆಗೆ ಒಳಪಟ್ಟಿದ್ದು, ಅವುಗಳಲ್ಲಿ ಶೇ. 90ರಷ್ಟು ಬೆಂಗಳೂರು ವಿಭಾಗಕ್ಕೆ ಸಂಬಂಧಪಟ್ಟವು.
* ಅಕ್ರಮ ಗಣಿಗಾರಿಕೆ ಕುರಿತು ಇಂದಿನವರೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಪರಿಶೀಲನೆಗಾಗಿ ಎಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯು ರಚನೆಗೆ ತೀರ್ಮಾನವಾಯಿತು.
* ಎತ್ತಿನಹೊಳೆ ಯೋಜನೆ, ಕಾರ್ಮಿಕರ ಮಕ್ಕಳಿಗಾಗಿ ಪ್ರತಿ ಜಿಲ್ಲೆಯಲ್ಲಿ ವಸತಿ ಶಾಲೆಗಳ ಸ್ಥಾಪನೆ ಸೇರಿ ಹಲವು ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.
ಬೆಂಗಳೂರು ವಿವಿಯನ್ನು ಮನಮೋಹನ್ ಸಿಂಗ್ ವಿವಿ ಎಂದು ಮರುನಾಮಕರಣ
Published by Jyoti Angadi
03 ಜುಲೈ 2025