* ಭಾರತದ ಗ್ರೀನ್ ಆಫೀಸ್ ಸ್ಪೇಸ್(ಹಸಿರು ಕಚೇರಿ ಸ್ಥಳಾವಕಾಶ)ಪಟ್ಟಿಯಲ್ಲಿ ಬೆಂಗಳೂರು ಅಗ್ರ ಸ್ಥಾನ ಪಡೆದಿದ್ದು, ಶೇಕಡಾ 30 ರಷ್ಟು ಅಂದರೆ 104.5 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಸಿಲಿಕಾನ್ ಸಿಟಿ ಹೊಂದಿದೆ.
* ಸೆಪ್ಟೆಂಬರ್ 27 ರಂದು ಬಿಡುಗಡೆಯಾದ ರಿಯಲ್ ಎಸ್ಟೇಟ್‌ನ CII-CBRE ವರದಿಯ ಪ್ರಕಾರ, 70.2 ಮಿಲಿಯನ್ ಚದರ ಅಡಿಗಳೊಂದಿಗೆ ಹಸಿರು ಕಚೇರಿಯನ್ನು ದೆಹಲಿ ಎನ್ ಸಿಆರ್ ಎರಡನೇ ಸ್ಥಾನದಲ್ಲಿದೆ.
* ದೇಶದ ವಾಣಿಜ್ಯ ರಾಜಧಾನಿ ಮುಂಬೈ, 56.6 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಹೊಂದುವ ಮೂಲಕ ಮೂರನೇ ಸ್ಥಾನದಲ್ಲಿದೆ. ಹಸಿರು ಕಚೇರಿ ಸ್ಥಳಾವಕಾಶದ ಪಟ್ಟಿಯಲ್ಲಿ ಹೈದರಾಬಾದ್ ನಾಲ್ಕನೆ ಸ್ಥಾನದಲ್ಲಿದ್ದು, ಚೆನ್ನೈ ಮತ್ತು ಪುಣೆ ನಂತರದ ಸ್ಥಾನದಲ್ಲಿವೆ.
* ಹಸಿರು ಕಛೇರಿಗಳನ್ನು ಇಂಧನ ದಕ್ಷತೆ ಮತ್ತು ಮರುಬಳಕೆ ವಸ್ತುಗಳಿಂದ ವಿನ್ಯಾಸಗೊಳಿಸಲಾಗಿರುತ್ತದೆ. ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವುದು, ಇಂಧನ ಉಳಿಸುವುದು ಮತ್ತು ಮಾಲಿನ್ಯ ಕಡಿಮೆ ಮಾಡುವುದು ಇದರ ಗುರಿಯಾಗಿದೆ.
ಭಾರತದ ಗ್ರೀನ್ ಆಫೀಸ್ ಸ್ಪೇಸ್ ಪಟ್ಟಿಯಲ್ಲಿ ಬೆಂಗಳೂರು ಅಗ್ರ ಸ್ಥಾನ
Published by Tajabi Pathan
29 ಸೆಪ್ಟೆಂಬರ್ 2023