* ಭಾರತ ಮಹಿಳಾ ಹಾಕಿ ತಂಡದ ಮಾಜಿ ನಾಯಕಿ ರಾಣಿ ರಾಂಪಾಲ್ (29) ನಿವೃತ್ತಿ ಘೋಷಿಸಿದ್ದಾರೆ. ಹರಿಯಾಣದ ರಾಣಿ ರಾಂಪಾಲ್ ಅವರು 14 ವರ್ಷದವರಿದ್ದಾಗ 2008ರಲ್ಲಿ ಮೊದಲ ಬಾರಿಗೆ ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿ ಆಯ್ಕೆಯಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾಕಿ ಪಂದ್ಯವನ್ನಾಡಿದ್ದರು.
* ಭಾರತ ಪರ 254 ಪಂದ್ಯಗಳಲ್ಲಿ ರಾಣಿ 205 ಗೋಲು ಗಳಿಸಿದ್ದಾರೆ. 2021ರ ಟೊಕಿಯೊ ಒಲಿಂಪಿಕ್ಸ್‌ನಲ್ಲಿ ರಾಣಿ ನೇತೃತ್ವದ ಹಾಕಿ ತಂಡ ನಾಲ್ಕನೇ ಸ್ಥಾನ ಪಡೆದುಕೊಂಡಿತ್ತು. ರಾಣಿ ಅವರು, 2020ರಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಹಾಗೂ ದೇಶದ ನಾಲ್ಕನೇ ಅತ್ಯುನ್ನತ ಗೌರವವಾದ ಪದ್ಮಶ್ರಿ ಪ್ರಶಸ್ತಿಗೆ ಭಾಜರಾಗಿದ್ದಾರೆ.
* ರಾಣಿ ರಾಂಪಾಲ್ ಅವರು ಇತ್ತೀಚೆಗೆ ರಾಷ್ಟ್ರೀಯ ಮಹಿಳಾ ಜೂನಿಯರ್ ಹಾಕಿ ತಂಡದ ಕೋಚ್ ಆಗಿ ನೇಮಕಗೊಂಡಿದ್ದರು. 16 ವರ್ಷಗಳ ಸುದೀರ್ಘ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ.
ಭಾರತದ ಮಹಿಳಾ ಹಾಕಿ ತಂಡದ ಮಾಜಿ ನಾಯಕಿ ರಾಣಿ ರಾಂಪಾಲ್ ನಿವೃತ್ತಿ ಘೋಷಣೆ
Published by Yallamma G
25 ಅಕ್ಟೋಬರ್ 2024