* ರಿಯೋ ಒಲಿಂಪಿಕ್ಸ್ 2016 ರಲ್ಲಿ ನಾಲ್ಕನೇ ಸ್ಥಾನ ಪಡೆದ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರು ಅಕ್ಟೋಬರ್ 07 ರಂದು (ಸೋಮವಾರ) ಜಿಮ್ನಾಸ್ಟಿಕ್ಸ್ ಗೆ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಖ್ಯಾತ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರು 31ನೇ ವಯಸ್ಸಿನಲ್ಲಿ ಜಿಮ್ನಾಸ್ಟ್ ಕ್ರೀಡೆಗೆ ವಿದಾಯ ಘೋಷಣೆ ಮಾಡಿದ್ದಾರೆ.
* 2014ರ ಗ್ಲಾಸ್ಗೋ ಗೇಮ್ಸ್‌ನಲ್ಲಿ ವಾಲ್ಟ್ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಜಯಿಸುವ ಮೂಲಕ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಜಿಮ್ನಾಸ್ಟ್ ಆಗಿದ್ದರು.
*2018 ರಲ್ಲಿ ನಡೆದ FIG ಆರ್ಟಿಸ್ಟಿಕ್ ಜಿಮ್ನಾಸ್ಟಿಕ್ಸ್ ವರ್ಲ್ಡ್ ಚಾಲೆಂಜ್ ಕಪ್‌ನಲ್ಲಿ ಜಯಗಳಿಸುವ ಮೂಲಕ ಜಾಗತಿಕ ಜಿಮ್ನಾಸ್ಟಿಕ್ಸ್ ಈವೆಂಟ್‌ನಲ್ಲಿ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
* 2024ರ ಏಷ್ಯನ್ ಜಿಮ್ನಾಸ್ಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ದೀಪಾ ಕರ್ಮಾಕರ್ ಅವರು ಏಷ್ಯನ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.
* ಕಷ್ಟಕರವಾದ ಪ್ರೊಡುನೋವಾ ವಾಲ್ಟ್ ಪ್ರದರ್ಶನ ಮಾಡಲು ಹೆಸರುವಾಸಿಯಾದ ದೀಪಾ ಗಾಯದ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಅವರ ದೇಹದ ಪರಿಸ್ಥಿತಿಯನ್ನು ಪರಿಗಣಿಸಿ, ಅವರು ನಿವೃತ್ತಿಯ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಮಂಗಳವಾರ, 08 ಅಕ್ಟೋಬರ್ 2024
12:03 ಅಪರಾಹ್ನ
Daily PDF
ಭಾರತದ ಮೊದಲ ಮಹಿಳಾ ಜಿಮ್ನಾಸ್ಟ್ ದೀಪಾ ಕರ್ಮಾಕರ್ ನಿವೃತ್ತಿ ಘೋಷಣೆ
Authored by:
Bhagya R K