* ಭಾರತೀಯ ರಕ್ಷಣಾ ಮತ್ತು ಏರೋಸ್ಪೇಸ್ ಕಂಪನಿಯಾದ ಫ್ಲೈಯಿಂಗ್ ವೆಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಟೆಕ್ನಾಲಜೀಸ್ ಬೆಂಗಳೂರಿನಲ್ಲಿ FWD-200B ಅನ್ನು ಅನಾವರಣಗೊಳಿಸುವ ಮೂಲಕ ದೇಶದ ಮೊದಲ ಸ್ವದೇಶಿ ಬಾಂಬರ್ ಮಾನವರಹಿತ ವೈಮಾನಿಕ ವಾಹನ (UAV) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
* FWD-200B ಮಧ್ಯಮ-ಎತ್ತರ, ದೀರ್ಘ-ಸಹಿಷ್ಣುತೆ (MALE) ಮಾನವರಹಿತ ಯುದ್ಧ ವೈಮಾನಿಕ ವಾಹನವಾಗಿದ್ದು, ಸಂಪೂರ್ಣವಾಗಿ ಭಾರತದಲ್ಲಿ ವಿನ್ಯಾಸಗೊಳಿಸಲಾಗಿದೆ. ಈ ಮೂಲಕ ಭಾರತವು ಸುಧಾರಿತ ಬಾಂಬರ್‌ಗಳ ಸಾಮರ್ಥ್ಯವುಳ್ಳ ದೇಶಗಳ ಸಾಲಿಗೆ ಸೇರಿದೆ’
* ಭಾರತದ ಮೊದಲ ಮಿಲಿಟರಿ ದರ್ಜೆಯ ಬಾಂಬರ್ ಡ್ರೋಣ್ ಇದಾಗಿದೆ. ಡ್ರೋಣ್ ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿ ನೆಲೆಗಳ ಮೇಲೆ ಉದುರಿಸಬಲ್ಲದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ತಿಳಿಸಿದ್ದಾರೆ.
ಭಾರತದ ಮೊದಲ ಸ್ವದೇಶಿ ಬಾಂಬರ್ ಮಾನವರಹಿತ UAV ಬೆಂಗಳೂರಲ್ಲಿ ಅನಾವರಣ
Published by Yallamma G
07 ಮೇ 2024