* ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ(ಫೆ.17) ಪ್ರಕಟಿಸಿದೆ.
* ಹಾಲಿ ಮುಖ್ಯ ಚುನಾವಣಾ ಆಯುಕ್ತರಾಗಿರುವ ರಾಜೀವ್ ಕುಮಾರ್ ಅವರು 65 ವರ್ಷ ವಯಸ್ಸಿನ ನಂತರ ಮಂಗಳವಾರ(ಫೆ.18) ಅಧಿಕಾರದಿಂದ ನಿವೃತ್ತರಾಗಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ನೇತೃತ್ವದ ಆಯ್ಕೆ ಸಮಿತಿಯು ಸಭೆ ಸೇರಿ ಜ್ಞಾನೇಶ್ ಕುಮಾರ್ ಅವರನ್ನು ಸಿಇಸಿ ಆಗಿ ಆಯ್ಕೆ ಮಾಡಿದೆ.
* 26ನೇ ಚೀಫ್ ಇಲೆಕ್ಷನ್ ಕಮಿಷನರ್ ಆಗಿ ಇವರ ನೇಮಕವನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದೆ.
* 1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ ಕಳೆದ ವರ್ಷ ಮಾರ್ಚ್ ನಿಂದ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಪಟ್ಟಂತೆ ಜಾರಿಯಾಗಿರುವ ಹೊಸ ಕಾನೂನಿನ ಪ್ರಕಾರ ನೇಮಕವಾದ ಮೊದಲ ಮುಖ್ಯ ಚುನಾವಣಾ ಆಯುಕ್ತರು ಎನ್ನುವ ಹೆಗ್ಗಳಿಕೆಗೆ ಜ್ಞಾನೇಶ್ ಕುಮಾರ್ ಪಾತ್ರರಾಗಿದ್ದಾರೆ.
* ಮುಖ್ಯ ಚುನಾವಣಾ ಆಯುಕ್ತರ ಅಧಿಕಾರಾವಧಿ ಆರು ವರ್ಷ, ಅಥವಾ ಅವರು 65 ವರ್ಷ ತುಂಬುವವರೆಗೆ ಅಧಿಕಾರದಲ್ಲಿರುತ್ತಾರೆ.
* ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಕಾನೂನಿನ ಅಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಎಂಬ ಹೆಗ್ಗಳಿಕೆಗೆ ಕುಮಾರ್ ಪಾತ್ರರಾಗಿದ್ದಾರೆ.
* ಸಮಿತಿಯು ಸೋಮವಾರ (ಫೆ.17) ಸಂಜೆ ದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ಪ್ರಧಾನಿ ಕಚೇರಿಯಲ್ಲಿ ಸಭೆ ಸೇರಿತು. ಶೋಧನಾ ಸಮಿತಿಯು ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರನ್ನು ಅದು ಶಿಫಾರಸು ಮಾಡಿದೆ. ಇದೇ ವೇಳೆ 1989ರ ಬ್ಯಾಚ್‌ನ ಐಎಎಸ್ ಅಧಿಕಾರಿ ಡಾ.ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.
* ಜ್ಞಾನೇಶ್ ಕುಮಾರ್, 1988ರ ಬ್ಯಾಚ್‌ನ ಕೇರಳ ಕೇಡರ್ ಐಎಎಸ್ ಅಧಿಕಾರಿ, ಸಹಕಾರ ಸಚಿವಾಲಯದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ 2023ರಲ್ಲಿ ನಿವೃತ್ತರಾದರು. ಅವರು ಮೇ 2022ರಿಂದ ಅಮಿತ್ ಶಾ ನೇತೃತ್ವದ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿದ್ದರು.
* 2016-2021ರ ಅವಧಿಯಲ್ಲಿ ಗೃಹ ಸಚಿವಾಲಯದಲ್ಲಿ ಜಂಟಿ ಮತ್ತು ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, 2019ರಲ್ಲಿ 370ನೇ ವಿಧಿ ರದ್ದುಪಡಿಸಿದಾಗ ಜಮ್ಮು-ಕಾಶ್ಮೀರ ಡೆಸ್ಕ್ ಮುಖ್ಯಸ್ಥರಾಗಿದ್ದರು.
* ಮಾರ್ಚ್ 2023ರಲ್ಲಿ ಸುಖ್ಬೀರ್ ಸಿಂಗ್ ಸಂಧುವ ಜೊತೆ ಚುನಾವಣಾ ಆಯುಕ್ತರಾಗಿ ನೇಮಕವಾದರು. ಅವರು ಕಾನ್ಪುರ ಐಐಟಿಯಿಂದ ಬಿ-ಟೆಕ್ ಮತ್ತು ಬಿಸಿನೆಸ್ ಫೈನಾನ್ಸ್‌ನಲ್ಲಿ ಅಧ್ಯಯನ ಮಾಡಿದ್ದಾರೆ.
ಮಂಗಳವಾರ, 18 ಫೆಬ್ರುವರಿ 2025
11:06 ಪೂರ್ವಾಹ್ನ
Daily PDF
ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರು ನೇಮಕ
Authored by:
Jyoti Angadi