* ಭಾರತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಮನ್ವೆಲ್ತ್ ಆಫ್ ಡೊಮಿನಿಕಾ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ 'ದಿ ಡೊಮಿನಿಕಾ ಅವಾರ್ಡ್ ಆಫ್ ಹಾನರ್' ('The Dominica Award of Honour') ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.* ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ತಮ್ಮ ದೇಶಕ್ಕೆ ಸಹಾಯ ಮಾಡಿದ್ದಕ್ಕಾಗಿ ಮತ್ತು ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೌರವಿಸಲು ಡೊಮಿನಿಕಾ ಸರ್ಕಾರ ನಿರ್ಧರಿಸಿದೆ. * ಇದಕ್ಕಾಗಿ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ 'ಡೊಮಿನಿಕಾ ಅವಾರ್ಡ್ ಆಫ್ ಆನರ್' ಅನ್ನು ಪ್ರಧಾನಿ ಮೋದಿಯವರಿಗೆ ನೀಡಲಿದೆ.* 2021ರ ಫೆಬ್ರವರಿಯಲ್ಲಿ COVID-19 ಉತ್ತುಂಗದಲ್ಲಿದ್ದ ಕೋವಿಡ್ ಸಮಯದಲ್ಲಿ ಇಡೀ ವಿಶ್ವದಲ್ಲಿ ಕೋವಿಡ್ ಲಸಿಕೆಗಳಿಗೆ ಭಾರೀ ಬೇಡಿಕೆ ಇದ್ದಾಗ 70000 ಡೋಸ್ಗಳಷ್ಟು ಆಸ್ಟ್ರಾಜೆನಿಕಾ ಕೋವಿಡ್ ಲಸಿಕೆಯನ್ನು ಉಚಿತವಾಗಿದ್ದ ನೀಡಿ ಮಾನವೀಯತೆ ಮೆರೆದಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆರೆಬಿಯನ್ ದೇಶವಾದ ಡೊಮಿನಿಕಾ ತನ್ನ ಅತ್ಯುನ್ನತ ನಾಗರಿಕ ಗೌರವ ನೀಡಲು ನಿರ್ಧರಿಸಿದೆ.* ಈ ಲಸಿಕೆ ಪೂರೈಕೆಯನ್ನು ಭಾರತದ 'ಲಸಿಕೆ ಮೈತ್ರಿ' ನೀತಿಯ ಅಡಿಯಲ್ಲಿ ಮಾಡಿತ್ತು. ಈ ಮೂಲಕ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಹಾಯ ಮಾಡುವ ಗುರಿ ಭಾರತ ಹೊಂದಿತ್ತು.* ಮುಂಬರುವ ಭಾರತ-CARICOM (ಕೆರಿಬಿಯನ್ ಸಮುದಾಯ) ಶೃಂಗಸಭೆಯಲ್ಲಿ ಡೊಮಿನಿಕನ್ ಅಧ್ಯಕ್ಷ ಸಿಲ್ವಾನಿ ಬರ್ಟನ್ ಪ್ರಧಾನಿ ಮೋದಿಯವರಿಗೆ ಗೌರವವನ್ನು ನೀಡಲಿದ್ದಾರೆ. * ಈ ಶೃಂಗಸಭೆಯು ಗಯಾನಾದ ಜಾರ್ಜ್ಟೌನ್ನಲ್ಲಿ ನವೆಂಬರ್ 19 ಮತ್ತು 21ರ ನಡುವೆ ನಡೆಯಲಿದೆ. ಈ ಸಂದರ್ಭದಲ್ಲಿ ಭಾರತ ಮತ್ತು ಕೆರಿಬಿಯನ್ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಪರಿಗಣಿಸಲಾಗುವುದು. * ಡೊಮಿನಿಕಾ ದೇಶದಲ್ಲಿ ಆರೋಗ್ಯ, ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಸುಸ್ಥಿರ ಬೆಳವಣಿಗೆ ಉತ್ತೇಜಿಸುವ ನಿಟ್ಟಿನಲ್ಲಿ ಭಾರತದ ಬೆಂಬಲವನ್ನು ಗುರುತಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದೆ.