* ಭಾರತದ ಸಂವಿಧಾನದ 124ನೇ ವಿಧಿಯ ಷರತ್ತು (2)ರ ಅನ್ವಯ ನೀಡಲಾದ ಅಧಿಕಾರ ಚಲಾಯಿಸುವ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮುಂದಿನ ಸಿಜೆಐ ಆಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ.
* ನವೆಂಬರ್ 11ರಂದು ಸಿಜೆಐ ಹುದ್ದೆಯಿಂದ ಹಾಲಿ ಸಿಜೆಐ ಚಂದ್ರಚೂಡ್ (DY ChandraChud) ನಿವೃತ್ತಿಯಾಗಲಿದ್ದಾರೆ. ಅಂದೇ 65 ವಯಸ್ಸಿನಲ್ಲಿ ಸಂಜೀವ್ ಖನ್ನಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದು, 2025ರ ಮೇ 13ರ ವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ.
* ಏಳು ತಿಂಗಳ ಅವಧಿಯನ್ನು ಹೊಂದಿರುತ್ತಾರೆ. ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನವೆಂಬರ್ 11 ರಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ.
* "ಭಾರತದ ಸಂವಿಧಾನ ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರೊಂದಿಗೆ ಸಮಾಲೋಚಿಸಿದ ನಂತರ, ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟೀಸ್ ಸಂಜೀವ್ ಖನ್ನಾ ಅವರನ್ನು ನವೆಂಬರ್ 11, 2024 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾರತದ ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (CJI) ಸಂಜೀವ್ ಖನ್ನಾ ನೇಮಕ
Published by Akshata Halli
25 ಅಕ್ಟೋಬರ್ 2024