* ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೋಡಾ ಮರು ನೇಮಕಗೊಂಡಿದ್ದಾರೆ.
* ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸ್ಯಾಮ್ ಪಿತ್ರೋಡಾ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿ ಮರುನೇಮಕಗೊಳಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಿರಿಯ ನಾಯಕ ಕೆಸಿ ವೇಣುಗೋಪಾಲ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
* ಪಿತ್ರೋಡಾ ಅವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಮೆರಿಕದಲ್ಲಿರುವಂತೆ ಪಿತ್ರಾರ್ಜಿತ ಆಸ್ತಿಯ ಮೇಲೆ ತೆರಿಗೆ ಹಾಕುವ ಪದ್ಧತಿಯನ್ನು ಭಾರತದಲ್ಲೂ ಜಾರಿಗೆ ತರಬೇಕು ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು.
* ಚುನಾವಣಾ ಭಾಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಬಿಜೆಪಿಯ ಹಲವು ನಾಯಕರು ಸ್ಯಾಮ್ ಪಿತ್ರೋಡಾ ಹೇಳಿಕೆಯನ್ನು ಖಂಡಿಸಿದ್ದರು. ಇದರ ಹಿನ್ನೆಲೆಯಲ್ಲಿ ಸ್ಯಾಮ್ ಪಿತ್ರೋಡಾ ಅವರು ಮೇ 8ರಂದು ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು.
ಭಾರತೀಯ ಕಾಂಗ್ರೆಸ್ ಸಾಗರೋತ್ತರ ಘಟಕದ ಮುಖ್ಯಸ್ಥರಾಗಿ ಸ್ಯಾಮ್ ಪಿತ್ರೋಡಾ ನೇಮಕ
Published by Yallamma G
28 ಜೂನ್ 2024