* ಭಾರತೀಯ ಸೇನಾ ನಿವೃತ್ತ ಮೇಜರ್ ಜನರಲ್ ಸಿ ಕೆ ಕರುಂಬಯ್ಯ(88) ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರಿನ ತಾಲೂಕಿನ ಹೆಮ್ಮನಹಳ್ಳಿಯ ಅವರ ತೋಟದ ಮನೆಯಲ್ಲಿ ಜನವರಿ 04 ರಂದು ನಿಧನರಾದರು.
* ಮಡಿಕೇರಿಯಲ್ಲಿ 1936ರ ಡಿಸೆಂಬರ್.3ರಂದು ಡಾ.ಸಿ.ಬಿ.ಕಾರಿಯಪ್ಪ ಪುತ್ರರಾಗಿ ಜನಿಸಿದ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಹತ್ತಿರದ ಸಂಬಂಧಿ. ಮಡಿಕೇರಿಯ ಸೆಂಟ್ರಲ್ ಪ್ರೌಢಶಾಲೆ, ಸರ್ಕಾರಿ ಕಾಲೇಜಿನಲ್ಲಿ ಶಿಕ್ಷಣ ಪಡೆದು 1957ರಲ್ಲಿ ಡೆಹ್ರಾಡೂನ್ ನ ಭಾರತೀಯ ಮಿಲಿಟರಿ ಅಕಾಡೆಮಿಗೆ ಸೇರಿದರು.
* ಮರಾಠ ಲಘು ಪದಾತಿದಳದ 5ನೇ ಬೆಟಾಲಿಯನ್ ನಲ್ಲಿ ಸೇನಾ ಸೇವೆ ಆರಂಭಿಸಿದರು. ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾದ ಸೇನೆ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದರು. 1965ರ ಭಾರತ ಪಾಕಿಸ್ತಾನ ಯುದ್ಧದಲ್ಲಿ ರಾಜಸ್ಥಾನ ಗಡಿಯಲ್ಲಿ ಹೋರಾಟ ನಡೆಸಿ ಪಾಕ್ ನ ಹಲವು ಗ್ರಾಮಗಳನ್ನು ವಶಪಡಿಸಿಕೊಂಡಿದ್ದರು.
* 1971ರ ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಸಾವಿರಾರು ಪಾಕ್ ಯೋಧರ ಶರಣಾಗತಿಗೆ ಕಾರಣರಾಗಿದ್ದರು. ಅಲ್ಲದೇ ಮಗುರಾದಲ್ಲಿ ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ಪಾಕಿಸ್ತಾನದ 300 ಟ್ರಕ್ ಗಳನ್ನು ವಶಕ್ಕೆ ಪಡೆದಿದ್ದರು. ಅವರು ಮುನ್ನಡೆಸಿದ್ದ ಪಡೆಗೆ ರಾಷ್ಟ್ರಪತಿ ಗೌರವ ದೊರೆತಿತ್ತು. ಕರುಂಬಯ್ಯ ಅವರಿಗೆ ಸೇನಾ ಪದಕವೂ ಸಿಕ್ಕಿತ್ತು.
* ಲಡಾಖ್ ನಲ್ಲಿ 121 ಇನ್ ಫ್ಯಾನ್ಸಿ ಬ್ರಿಗೇಡ್ ಗ್ರೂಪ್ ಮುನ್ನಡೆಸಿದ್ದ ಕರುಂಬಯ್ಯ ಅವರು ಹೆಚ್ಚುವರಿ ಮಿಲಿಟರಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. 35 ವರ್ಷ ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ 1991 ಡಿಸೆಂಬರ್ 31 ರಂದು ನಿವೃತ್ತರಾಗಿದ್ದರು.
ಶುಕ್ರವಾರ, 05 ಜನವರಿ 2024
4:56 ಅಪರಾಹ್ನ
Daily PDF
ಭಾರತೀಯ ಸೇನಾ ನಿವೃತ್ತ ಮೇಜರ್ ಜನರಲ್ ಸಿ.ಕೆ. ಕರುಂಬಯ್ಯ ನಿಧನ
Authored by:
Bhagya R K