* ಭೂತಾನ್‌ನಿಂದ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರವು ಇತ್ತೀಚೆಗೆ ತೆಗೆದುಕೊಂಡ ನಿರ್ಧಾರವು ರೈತರಲ್ಲಿ ಆತಂಕ ಮೂಡಿಸಿದೆ. ಸದ್ಯ ಅಡಿಕೆ ಧಾರಣೆ ಏರಿಕೆಯಾಗುತ್ತಿರುವ ಸಂದರ್ಭದಲ್ಲೇ ಕೇಂದ್ರ ಸರ್ಕಾರದ ಈ ನೀತಿ ಬೆಲೆ ಕುಸಿತದ ಆತಂಕಕ್ಕೆ ಕಾರಣವಾಗಿದೆ.
* ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವಾಲಯ ಭೂತಾನ್‌ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದಿಗೆ ಒಪ್ಪಿಗೆ ನೀಡಿರುವದು ರೈತರಲ್ಲಿಆತಂಕ ಮೂಡಿಸಿದೆ.
* ಅಡಿಕೆಯ ಆಮದಿನಿಂದ ದೇಶೀಯ ಅಡಿಕೆಯ ಬೆಲೆ ಕುಸಿತವಾಗುತ್ತಿದ್ದು, ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರೈತರು ಹಾಗೂ ರೈತ ಸಂಘಟನೆಗಳು ಇಲಾಖೆಗೆ ಮನವಿ ಸಲ್ಲಿಸಿದ್ದವು.
* ಅಡಿಕೆಯ ಅಡೆತಡೆ ಇಲ್ಲದ ಆಮದು ನಿಯಂತ್ರಿಸಲು ಹಾಗೂ ಕಳಪೆ ಗುಣಮಟ್ಟದ ಅಡಿಕೆ ಮಾರುಕಟ್ಟೆಗೆ ಬರುವುದನ್ನು ತಪ್ಪಿಸಲು ಸಚಿವಾಲಯವು ಅನೇಕ ಉಪಕ್ರಮಗಳನ್ನು ಕೈಗೊಂಡಿದೆ.
ಸೋಮವಾರ, 07 ಆಗಸ್ಟ್ 2023
10:18 ಪೂರ್ವಾಹ್ನ
Daily PDF
ಭಾರತಕ್ಕೆ ಬರಲಿದೆ 17 ಸಾವಿರ ಟನ್ ಅಡಿಕೆ ಆಮದಿಗೆ ಒಪ್ಪಿಗೆ
Authored by:
Tajabi Pathan