* ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಅವರು ದೇವ್ಜಿತ್ ಸೈಕಿಯಾ ಅವರನ್ನು ಮಂಡಳಿಯ ಹಂಗಾಮಿ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ. ಬಿಸಿಸಿಐ ಮಾಜಿ ಕಾರ್ಯದರ್ಶಿ ಜಯ್ ಶಾ ಅವರು ಪ್ರಸ್ತುತ ಐಸಿಸಿ ಅಧ್ಯಕ್ಷರಾಗಿದ್ದಾರೆ. * ಜಯ್ ಶಾ ಅವರ ಸ್ಥಾನಕ್ಕೆ ದೇವಜಿತ್ ಸೈಕಿಯಾ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಂಗಾಮಿ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಡಿಸೆಂಬರ್ 1ರಂದು ಜಯ್ ಶಾ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಹೊಸ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.* ಅಸ್ಸಾಂ ಮೂಲದ ಸೈಕಿಯಾ ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗ. ಪ್ರಸ್ತುತ ಬಿಸಿಸಿಐನ ಜಂಟಿ ಕಾರ್ಯದರ್ಶಿಯಾಗಿದ್ದಾರೆ. ಸೈಕಿಯಾ ಮುಂದಿನ ವರ್ಷದ ಸೆಪ್ಟೆಂಬರ್ವರೆಗೆ ಈ ಹುದ್ದೆಯಲ್ಲಿ ಇರಲಿದ್ದು, ನಂತರ ಕಾರ್ಯದರ್ಶಿಯನ್ನು ಖಾಯಂ ಆಗಿ ನೇಮಿಸಲಾಗುವುದು.* ಐಸಿಸಿಯ 16ನೇ ಮುಖ್ಯಸ್ಥರನ್ನಾಗಿ ನೇಮಕಗೊಂಡಿರುವ ಜಯ್ ಶಾ ಅವರು ಈ ಹುದ್ದೆಗೇರಿದ ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಹಾಗೂ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ 5ನೇ ಭಾರತೀಯ ಎಂಬ ಹೆಗ್ಗಳಿಕೆಗೂ ಜಯ್ ಶಾ ಅವರು ಪಾತ್ರರಾಗಿದ್ದಾರೆ. ಜಯ್ ಶಾ ಅವರಿಗೂ ಮುನ್ನ ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್. ಶ್ರೀನಿವಾಸನ್, ಶಶಾಂಕ್ ಮನೋಹರ್ ಅವರು ಈ ಹುದ್ದೆಯನ್ನು ನಿರ್ವಹಿಸಿದ್ದರು.