ಕ್ರಿಕೆಟ್ ಜಗತ್ತಿನಲ್ಲಿ ಈಗ ಭಾರೀ ಚರ್ಚೆಯಾಗುತ್ತಿರುವ ವಿಷಯವೆಂದರೆ ಬಾಂಗ್ಲಾದೇಶ ಮತ್ತು ಐಪಿಎಲ್ (IPL) ನಡುವಿನ ಸಂಘರ್ಷ. ಸ್ಟಾರ್ ಸ್ಪಿನ್ ಬೌಲರ್ ಮುಸ್ತಾಫಿಜುರ್ ರಹಮಾನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ (KKR) ತಂಡದಿಂದ ಹೊರಗಿಟ್ಟ ಹಿನ್ನೆಲೆಯಲ್ಲಿ, ಬಾಂಗ್ಲಾದೇಶ ಸರ್ಕಾರವು ತನ್ನ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಪ್ರಸಾರವನ್ನು ಸಂಪೂರ್ಣವಾಗಿ ನಿಷೇಧಿಸಿದೆ.
* ಬಾಂಗ್ಲಾದೇಶದ ಸ್ಪಿನ್ ಬೌಲರ್ ಮುಸ್ತಾಫಿಜುರ್ ರಹಮಾನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ (KKR) ತಂಡದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಬಾಂಗ್ಲಾ ಸರ್ಕಾರವು ತನ್ನ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಸಾರಕ್ಕೆ ನಿರ್ಬಂಧ ವಿಧಿಸಿದೆ. ಈ ಕುರಿತು ಸೋಮವಾರ (January-5) ಅಧಿಕೃತ ಆದೇಶ ಹೊರಡಿಸಲಾಗಿದ್ದು, ಬಾಂಗ್ಲಾದೇಶದ ಯಾವುದೇ ಟಿವಿ ಚಾನೆಲ್‌ಗಳು ಅಥವಾ ಡಿಜಿಟಲ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಐಪಿಎಲ್ ಪಂದ್ಯಗಳ ಪ್ರಸಾರ ನಡೆಸದಂತೆ ಸೂಚಿಸಲಾಗಿದೆ.
* 2026ರ ಮಾರ್ಚ್ 26ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದೆ ಎಂಬ ಹಿನ್ನಲೆಯಲ್ಲಿ ಈ ನಿರ್ಧಾರ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು KKR ತಂಡಕ್ಕೆ ಆಯ್ಕೆಯಾಗಿದ್ದ ಬಾಂಗ್ಲಾದ ಆಟಗಾರ ಮುಸ್ತಾಫಿಜುರ್ ರಹಮಾನ್ ಅವರನ್ನು ತಂಡದಿಂದ ಹೊರಗಿಡಲು ಆದೇಶಿಸಿದೆ ಎಂಬ ವರದಿಗಳಿವೆ. ಈ ಕ್ರಮಕ್ಕೆ ಸ್ಪಷ್ಟ ಕಾರಣಗಳನ್ನು ಬಿಸಿಸಿಐ ಇನ್ನೂ ಬಹಿರಂಗಪಡಿಸಿಲ್ಲ.
* ಈ ಬೆಳವಣಿಗೆಯಿಂದ ಬಾಂಗ್ಲಾದೇಶದಲ್ಲಿ ಕ್ರಿಕೆಟ್ ಅಭಿಮಾನಿಗಳಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಬಿಸಿಸಿಐನ ನಿರ್ಧಾರವು ಬಾಂಗ್ಲಾದ ಜನರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಬಾಂಗ್ಲಾ ಸರ್ಕಾರ ಹೇಳಿದೆ. ಈ ಹಿನ್ನೆಲೆಯಲ್ಲಿ, ಮುಂದಿನ ಸೂಚನೆ ನೀಡುವವರೆಗೆ ಐಪಿಎಲ್‌ನ ಎಲ್ಲ ಪಂದ್ಯಗಳ ಪ್ರಸಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಬಿಸಿಸಿಐ ನಿರ್ಧಾರಕ್ಕೆ ಪ್ರತಿಕ್ರಿಯೆ: ಐಪಿಎಲ್ ಪ್ರಸಾರ ನಿಷೇಧಿಸಿದ ಬಾಂಗ್ಲಾದೇಶ
Published by Akshata Halli
06 ಜನವರಿ 2026