* ಬ್ಯಾಂಕಿಂಗ್ ಕ್ಷೇತ್ರದಲ್ಲಿ 'ಸುಧಾರಣೆ' ತರಲು ಕೇಂದ್ರ ಸರ್ಕಾರ ಬಜೆಟ್ ಅಧಿವೇಶನದಲ್ಲಿ ಸರ್ಕಾರಿ ಸ್ವಾಮ್ಯದಲ್ಲಿರುವ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಅನುವಾಗುವ ಮಹತ್ವದ ತಿದ್ದುಪಡಿ ವಿಧೇಯಕ ಮಂಡಿಸುವ ಸಾಧ್ಯತೆಯಿದೆ.
* ಮೂಲಗಳ ಪ್ರಕಾರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949 ಮತ್ತು ಇತರ ಕಾಯ್ದೆಗಳ ತಿದ್ದುಪಡಿಗೆ ಮುಂದಾಗಿದ್ದು, ಇದಲ್ಲದೆ ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣಕ್ಕಾಗಿ 'ಬ್ಯಾಂಕಿಂಗ್ ಕಂಪನಿಗಳ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ-1970' ಮತ್ತು 1980ರ ಕಾಯ್ದೆಗೆ ತಿದ್ದುಪಡಿ ತರುವ ಸಾಧ್ಯತೆಗಳಿವೆ ಎನ್ನಲಾಗಿದೆ.
* ಸಂಸತ್ತಿನಲ್ಲಿ ಈ ತಿದ್ದುಪಡಿಗಳು ಅಂಗೀಕಾರವಾದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿನ ಸರ್ಕಾರದ ಪಾಲು ಈಗಿನ ಶೇ.51ಕ್ಕಿಂತ ಕಡಿಮೆ ಮಾಡಲು ಸರ್ಕಾರಕ್ಕೆ ಅವಕಾಶ ಸಿಗಲಿದೆ.
* 2021ರಂದ ಚಳಿಗಾಲದ ಅಧಿವೇಶನದ ವೇಳೆ ಸರ್ಕಾರ ಬ್ಯಾಂಕ್ ಕಾಯ್ದೆಗಳ ತಿದ್ದುಪಡಿಗೆ ಸರ್ಕಾರ ಪಟ್ಟಿ ಮಾಡಿತ್ತು, ಆದರೆ ಮಸೂದೆ ಮಂಡಿಸಿರಲಿಲ್ಲ. ಜುಲೈ 22 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದೆ. ಜುಲೈ .23ರಂದು ಬಜೆಟ್ ಮಂಡನೆ ನಡೆಯಲಿದೆ.
ಬ್ಯಾಂಕ್ಗಳ ಖಾಸಗೀಕರಣಕ್ಕೆ ಶೀಘ್ರದಲ್ಲೇ ಕಾಯ್ದೆ ತಿದ್ದುಪಡಿ
Published by Bhagya R K
15 ಜುಲೈ 2024