* ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (Justice DY Chandrachud) ಅವರು ಭಾರತದ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಔಪಚಾರಿಕವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 
* ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ 50 ನೇ ಸಿಜೆಐ (CJI) ಆಗಿದ್ದಾರೆ, ರಾಷ್ಟ್ರಪತಿ ಭವನದಲ್ಲಿ (Rashtrapati Bhavan) ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಉತ್ತರಾಧಿಕಾರಿಯಾಗಿ ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್​ ಡಿವೈ ಚಂದ್ರಚೂಡ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ಪ್ರಮಾಣ ವಚನ ಬೋಧಿಸಿದರು.
* ಉಪರಾಷ್ಟ್ರಪತಿ ಜಗದೀಪ್ ಧಂಖರ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 
* ನ್ಯಾಯಮೂರ್ತಿ ಚಂದ್ರಚೂಡ್ ಅವರು ನಿವೃತ್ತ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಸ್ಥಾನಕ್ಕೆ ಬಂದಿದ್ದಾರೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಅಧಿಕಾರಾವಧಿಯು ನವೆಂಬರ್ 10, 2024 ರವರೆಗೆ ಮುಂದುವರಿಯುತ್ತದೆ.
* ನ್ಯಾಯಮೂರ್ತಿ ಚಂದ್ರಚೂಡ್ ಅವರ ತಂದೆ ಜಸ್ಟಿಸ್ ವೈವಿ ಚಂದ್ರಚೂಡ್ ಅವರು 2 ಫೆಬ್ರವರಿ 1978 ರಿಂದ 11 ಜುಲೈ 1985 ರವರೆಗೆ ಭಾರತದ 16 ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು. 
* ನ್ಯಾಯಮೂರ್ತಿ ಚಂದ್ರಚೂಡ್ ಅವರು ದೇಶದ ಪ್ರಗತಿಪರ ಮತ್ತು ಉದಾರವಾದಿ ನ್ಯಾಯಾಧೀಶರೆಂದು ಪ್ರಸಿದ್ಧರಾಗಿದ್ದಾರೆ. ಅವರು ನಾಗರಿಕರ ಮೂಲಭೂತ ಹಕ್ಕುಗಳ ಬಗ್ಗೆ ಬಹಳ ಸಂವೇದನಾಶೀಲರು ಎಂದು ಪರಿಗಣಿಸಲಾಗಿದೆ. 
* ನ್ಯಾಯಮೂರ್ತಿ ಚಂದ್ರಚೂಡ್ ಅವರ ದೊಡ್ಡ ಲಕ್ಷಣವೆಂದರೆ ಕೆಟ್ಟದಾಗಿ ವರ್ತಿಸುವವರ ವಿರುದ್ಧ ಕಠಿಣ ವರ್ತನೆ ತೋರುತ್ತಾರೆನ್ನಲಾಗಿದೆ.
* ನವೆಂಬರ್ 11, 1959 ರಂದು ಜನಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಅವರು ಮೇ 13, 2016 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು. 
* ಅಕ್ಟೋಬರ್ 31, 2013 ರಿಂದ ಸುಪ್ರೀಂ ಕೋರ್ಟ್‌ಗೆ ನೇಮಕಗೊಳ್ಳುವವರೆಗೆ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ನ್ಯಾಯಮೂರ್ತಿ ಚಂದ್ರಚೂಡ್ ಅವರು ಮಾರ್ಚ್ 29, 2000 ರಿಂದ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವವರೆಗೆ ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದರು. 
* 1998 ರಿಂದ ಬಾಂಬೆ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ನೇಮಕಗೊಳ್ಳುವವರೆಗೆ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದರು. ಜೂನ್ 1998 ರಲ್ಲಿ ಬಾಂಬೆ ಹೈಕೋರ್ಟ್‌ನಿಂದ ಹಿರಿಯ ವಕೀಲರಾಗಿ ನಾಮನಿರ್ದೇಶನಗೊಂಡರು.