ಬುಧವಾರ, 08 ಜನವರಿ 2020
5:30 ಪೂರ್ವಾಹ್ನ
Daily PDF
7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇಲ್ಲ, ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ಮಾತ್ರ
Authored by:
Basavaraj Halli
ಬೆಂಗಳೂರು: ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಕುರಿತಾಗಿ ಹಲವು ದಿನಗಳಿಂದ ಕಾಡುತ್ತಿದ್ದ ಗೊಂದಲಕ್ಕೆ ಸರ್ಕಾರ ಕೊನೆಗೂ ತೆರೆ ಎಳೆದಿದ್ದು, ಬದಲಾಗಿ ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.
ಪ್ರಸಕ್ತ ಸಾಲಿನಲ್ಲೇ ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ನಡೆಸಲಿದ್ದೇವೆ. ಆಯಾ ಶಾಲೆಗಳಲ್ಲೇ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆಯನ್ನು ರಾಜ್ಯಮಟ್ಟದಲ್ಲಿ ಸಿದ್ಧಪಡಿಸಿ ಶಾಲೆಗಳಿಗೆ ನೀಡುತ್ತೇವೆ. ಮೌಲ್ಯಮಾಪನ ಕಾರ್ಯ ಜಿಲ್ಲಾ ಮಟ್ಟದ ಡಯಟ್ ಕೇಂದ್ರದಲ್ಲಿ ನಡೆಯಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಂಗಳವಾರ ತಿಳಿಸಿದರು.