ಶುಕ್ರವಾರ, 10 ಜನವರಿ 2020
5:30 ಪೂರ್ವಾಹ್ನ
Daily PDF
'ಫೆ.26ರಿಂದ ಮಾರ್ಚ್ 4'ರ ವರೆಗೆ 12ನೇ 'ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ'(BIFFES)
Authored by:
Basavaraj Halli
ಬೆಂಗಳೂರು : 12ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಂದಿನ ಫೆಬ್ರವರಿ 26ರಿಂದ ಮಾರ್ಚ್ 4ರ ವರೆಗೆ ಎಂಟು ದಿನಗಳ ಕಾಲ ನಡೆಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಚಲನಚಿತ್ರೋತ್ಸವ ಸಂಘಟನಾ ಸಮಿತಿ ನಿರ್ಧರಿಸಿದೆ.
ಫೆಬ್ರವರಿ 26ರಿಂದ ಆರಂಭಗೊಳ್ಳಲಿರುವ 12ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 4ರಂದು ಕೊನೆಗೊಳ್ಳಲಿದೆ. ಅಲ್ಲಿಯ ವರೆಗೆ ಒರಾಯನ್ ಮಾಲ್ ನಲ್ಲಿರುವ ಹನ್ನೊಂದು ಚಿತ್ರಮಂದಿರಗಳಲ್ಲಿ 50 ದೇಶಗಳ ಸುಮಾರು 200 ಚಲನಚಿತ್ರಗಳು ಪ್ರದರ್ಶನವಾಗಲಿವೆ.