ಬುಧವಾರ, 15 ಜನವರಿ 2020
5:30 ಪೂರ್ವಾಹ್ನ
Daily PDF
101ನೇ ವರ್ಷಕ್ಕೆ ಕಾಲಿಟ್ಟ ಪಾಪು
Authored by:
Siddaram Halli
ಈ ನಾಡು ಕಂಡ ಅಪರೂಪದ ಕನ್ನಡ ಹೋರಾಟಗಾರ, ನಾಡೋಜ, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರೇ ಬದುಕೇ ಒಂದು ಸ್ಪೂರ್ತಿ. ಕನ್ನಡಿಗರು ಪುಟ್ಟಪ್ಪವರನ್ನು ಎಂದಿಗೂ ಮರೆಯುವುದಿಲ್ಲ ಅವರ ಹೋರಾಟವೇ ಅಂತಹದು. ಕನ್ನಡ ಪತ್ರಿಕೋದ್ಯಮದ ಧೀಮಂತ ಪಾಟೀಲ ಪುಟ್ಟಪ್ಪ.ಪತ್ರಿಕೋದ್ಯಮ, ಸಾಹಿತ್ಯ ರಚನೆ ಮತ್ತು ಕನ್ನಡ ಹೋರಾಟದಲ್ಲಿ ಗಣ್ಯರಾದ ಪಾಟೀಲ ಪುಟ್ಟಪ್ಪನವರಿಗೆ ಇಂದುನೂರಾ ಒಂದನೇ ವರ್ಷಕ್ಕೆ ಪಾದಾರ್ಪಣೆ ಮಾಡಿದರು.
ಕನ್ನಡಿಗರೆಲ್ಲರಿಗೆ ಪಾಪು ಎಂದೇ ಚಿರಪರಿಚಿತರಾದ ಪಾಟೀಲ ಪುಟ್ಟಪ್ಪನವರು ಕನ್ನಡ ಪರ ಹೋರಾಟಗಳು, ಕಾಳಜಿಗಳಿಂದ ಜನಮಾನಸದಲ್ಲಿ ನೆಲೆಯಾದವರು. ಇವರ ಕನ್ನಡದ ಬಗೆಗಿನ ಮಗುವಿನಂತಹಾ ಪ್ರೀತಿ ಕನ್ನಡದ ಕುರಿತ ಐತಿಹಾಸಿಕ ಮತ್ತು ಸಾಂಸ್ಕೃತಿಕ ಒಳನೋಟ, ಅಪಾರವಾದ ಪಾಂಡಿತ್ಯ ಎಲ್ಲವೂ ಶ್ರೇಷ್ಠಮಟ್ಟ ದ್ದೆನ್ನುವುದರಲ್ಲಿ ಅನುಮಾನವಿಲ್ಲ. ಇಂತಹಾಮೇರು ವ್ಯಕ್ತಿತ್ವ ಇಂದು ನೂರನೇ ವಸಂತಕ್ಕೆ ಕಾಲಿಡುತ್ತಿದೆ.