ರವಿವಾರ, 19 ಜನವರಿ 2020
5:30 ಪೂರ್ವಾಹ್ನ
Daily PDF
ಮನೋಹರ ಪ್ರಸಾದ್ಗೆ "ಕರಾವಳಿ ಗೌರವ ಪ್ರಶಸ್ತಿ'
Authored by:
Basavaraj Halli
ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆಯುವ ಕರಾವಳಿ ಉತ್ಸವ ಸಂದರ್ಭ ನೀಡಲಾಗುವ “ಕರಾವಳಿ ಗೌರವ ಪ್ರಶಸ್ತಿ’ಗೆ ಈ ವರ್ಷ (2019-20) ಉದಯವಾಣಿ ಪತ್ರಿಕೆಯ ಸಹಾಯಕ ಸಂಪಾದಕ ಮನೋಹರ ಪ್ರಸಾದ್ ಆಯ್ಕೆಯಾಗಿದ್ದಾರೆ.
ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಲ್ಲಿಸಿದ ಗಮನಾರ್ಹ ಸಾಧನೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರವಿವಾರ ಸಂಜೆ 5.30ಕ್ಕೆ ಪಣಂಬೂರು ಬೀಚ್‌ನಲ್ಲಿ ನಡೆಯುವ ಕರಾವಳಿ ಉತ್ಸವದ ಸಮಾರೋಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ತಿಳಿಸಿದ್ದಾರೆ.