ಬುಧವಾರ, 22 ಜನವರಿ 2020
5:30 ಪೂರ್ವಾಹ್ನ
Daily PDF
24 ರಂದು ಭಾರತಕ್ಕೆ ಬ್ರೆಜಿಲ್ ಅಧ್ಯಕ್ಷರ ಭೇಟಿ
Authored by:
Basavaraj Halli
ನವದೆಹಲಿ: ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ ಇದೇ 24ರಂದು ಭಾರತಕ್ಕೆ ಆಗಮಿಸಲಿದ್ದಾರೆ.
ಭಾರತವು ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಅನ್ಯರಾಷ್ಟ್ರಗಳ ನಾಯಕರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನ ನೀಡುವುದು ವಾಡಿಕೆ. ಅದರಂತೆ ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ 71ನೇ ಗಣರಾಜ್ಯೋತ್ಸದ ಮುಖ್ಯ ಅತಿಥಿಯಾಗಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಪಾಲ್ಗೊಳ್ಳುತ್ತಿದ್ದಾರೆ