ಶುಕ್ರವಾರ, 24 ಜನವರಿ 2020
5:30 ಪೂರ್ವಾಹ್ನ
Daily PDF
ಗಣರಾಜ್ಯೋತ್ಸವಕ್ಕೆ ಹಾಸನದ ಬುಡಕಟ್ಟು ದಂಪತಿಗಳು
Authored by:
Basavaraj Halli
ಹಾಸನ, ಜನವರಿ 23 : ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಾಸನದ ಹಕ್ಕಿಪಿಕ್ಕಿ ಸಮುದಾಯದ ದಂಪತಿಗಳು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಮತ್ತು ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.
ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಹಿಂದಿನಿಂದಲೂ ಪ್ರತಿ ರಾಜ್ಯದಿಂದ ಇಬ್ಬರನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತಿದೆ. ಈ ಬಾರಿ ಕರ್ನಾಟಕದಿಂದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಂಗಡಿಹಳ್ಳಿಯ ಹಕ್ಕಿಪಿಕ್ಕಿ ಜನಾಂಗದ ಹೂರಾಜ್-ಚಂದೋಶಿ ದಂಪತಿ ಆಯ್ಕೆಯಾಗಿದ್ದಾರೆ.