ನವದೆಹಲಿ: ಕಾಶ್ಮೀರದ ಬಿಕ್ಕಟ್ಟು ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ವಿಷಯವಾಗಿದ್ದು, ಮೂರನೆಯವರ ಹಸ್ತಕ್ಷೇಪ, ಮಧ್ಯಸ್ತಿಕೆಗೆ ಅವಕಾಶ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟ, ಖಡಕ್ ಸಂದೇಶ ರವಾನಿಸಿದೆ. ದಾವೋಸ್ನಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಥಿಕ ಶೃಂಗಸಭೆಯಲ್ಲಿ ವಿಶೇಷ ಭಾಷಣದ ವೇಳೆ ಕಾಶ್ಮೀರದ ಬಿಕ್ಕಟ್ಟನ್ನು ಉಲ್ಲೇಖಿಸಿ ಮಾತನಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 'ಕಾಶ್ಮೀರಕ್ಕೆ ಸಂಬಂಧಿಸಿದ ವಿಚಾರವನ್ನು ಅಮೆರಿಕ ಗಮನಿಸುತ್ತಿದೆ. ಅಲ್ಲದೆ, ಭಾರತ ಮತ್ತು ಪಾಕಿಸ್ತಾನ ಇಚ್ಛಿಸುವುದಾದರೆ ಕಾಶ್ಮೀರ ಬಿಕ್ಕಟ್ಟು ಬಗೆಹರಿಸಲು ಅಮೆರಿಕ ಸಹಾಯ ಮಾಡಲಿದೆ ಎಂಬ ಅಭಯ ನೀಡಿದ್ದರು.