ರವಿವಾರ, 26 ಜನವರಿ 2020
5:30 ಪೂರ್ವಾಹ್ನ
Daily PDF
ಗಣರಾಜ್ಯೋತ್ಸವದ ಮುಖ್ಯ ಅತಿಥಿ ಬ್ರೆಜಿಲ್ ಅಧ್ಯಕ್ಷ ಬೋಲ್ಸೋನಾರೊ ಭಾರತಕ್ಕೆ ಆಗಮನ
Authored by:
Surekha Halli
ನವದೆಹಲಿ: ಭಾರತದ 71ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವ ನಿಟ್ಟಿನಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೊ ನವದೆಹಲಿಗೆ ಆಗಮಿಸಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ದೆಹಲಿಗೆ ಆಗಮಿಸಿದ ಬೋಲ್ಸೊನಾರೊ ಕೇಂದ್ರ ಸಚಿವ ವಿ ಮುರಳೀಧರನ್ ಅವರ ಜತೆಗೂಡಿ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪಗುಚ್ಚ ಇರಿಸಿ ಗೌರವ ಸಲ್ಲಿಸಿದ್ದಾರೆ.